ಗಡಿಯಲ್ಲಿ ಪಾಕ್ ಉದ್ಧಟತನ: ಪಾಕ್ ಸೇನೆ ದಾಳಿಗೆ ಬೆದರಿದ ಸ್ಥಳೀಯರು 

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸುತ್ತಿದ್ದು, ಪಾಕಿಸ್ತಾನ ಸೇನೆ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿಗಳಿಂದಾಗಿ ಸ್ಥಳೀಯ ನಿವಾಸಿಗಳು ಭೀತಿಗೊಳಗಾಗಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸುತ್ತಿದ್ದು, ಪಾಕಿಸ್ತಾನ ಸೇನೆ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿಗಳಿಂದಾಗಿ ಸ್ಥಳೀಯ ನಿವಾಸಿಗಳು ಭೀತಿಗೊಳಗಾಗಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಕಥುವಾ ಬಳಿಯ ಹೀರಾನಗರ್ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದ್ದು, ಗುಂಡಿನ ಚಕಮಕಿಗಳಿಂದಾಗಿ ಸ್ಥಳೀಯ ನಿವಾಸಿಗಳು ಭೀತಿಗೊಳಗಾಗಿದ್ದಾರೆ. 

ಕಳೆದ ರಾತ್ರಿ 10.30ರಿಂದಲೂ ಪಾಕಿಸ್ತಾನ ಸೇನೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇದ್ದು, ಇಂದು ಬೆಳಿಗ್ಗೆ ಕೂಡ ದಾಳಿಯನ್ನು ಮುಂದುವರೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com