ದೇಶದಾದ್ಯಂತ ದಸರಾ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ ಶುಭಾಶಯ

ದೇಶದಾದ್ಯಂತ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಶುಭಾಶಯ ಕೋರಿದ್ದಾರೆ. 

Published: 08th October 2019 08:17 AM  |   Last Updated: 08th October 2019 08:17 AM   |  A+A-


Prime minister Modi

ಪ್ರಧಾನಮಂತ್ರಿ ನರೇಂದ್ರ ಮೋದಿ

Posted By : Manjula VN
Source : ANI

ನವದೆಹಲಿ: ದೇಶದಾದ್ಯಂತ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಶುಭಾಶಯ ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಿಜಯದಶಮಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ. ಅಲ್ಲದೆ, ಕಳೆದ ವರ್ಷದ ದಸರಾ ಹಬ್ಬದ ವೇಳೆ ಭೇಟಿ ನೀಡಿದ್ದ ಕಾರ್ಯಕ್ರಮಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 

ಇದರಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೂ ಕೂಡ ಶುಭಾಶಯ ಕೋರಿದ್ದು, ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಜನರಿಗೆ ಯಶಸ್ಸು, ಸಮೃದ್ಧಿ ಮತ್ತು ಸಂತೋಷವನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಈ ಬಾರಿಯ ಉತ್ಸವ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು ಹಾಗೂ ನಿರ್ಗತಿಕರನ್ನು ಮತ್ತು ವಂಚಿತರ ಕುರಿತು ಕಾಳಜಿವಹಿಸುವ ಸಮಾಜವನ್ನು ರೂಪಿಸಲು ಪ್ರೇರೇಪಿಸಲಿ ಎಂದು ಹಾರೈಸಿದ್ದಾರೆ. 

ಇದೇ ರೀತಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp