ಸಿಂಧಿಯಾ ಹೇಳಿದ್ದು ಸರಿ, 2 ಲಕ್ಷದವರೆಗೆ ರೈತರ ಸಾಲಮನ್ನಾ ಮಾಡುತ್ತೇವೆ: ಕಮಲ್ ನಾಥ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೇಳಿಕೆಯನ್ನು ಸ್ವಾಗತಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡಲಿದೆ ಎಂದು ಶನಿವಾರ ಹೇಳಿದ್ದಾರೆ.
ಕಮಲ್ ನಾಥ್
ಕಮಲ್ ನಾಥ್

ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೇಳಿಕೆಯನ್ನು ಸ್ವಾಗತಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಸಿಂದಿಯಾ ಅವರು ಹೇಳಿದ್ದು ಸರಿ ಇದೆ. ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡುವುದಾಗಿ ನಾವು ಭರವಸೆ ನೀಡಿದ್ದೇವು. ಆದರೆ ಮೊದಲ ಕಂತಿನಲ್ಲಿ 50 ಸಾವಿರ ರೂಪಾಯಿ ಮನ್ನಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ 2 ಲಕ್ಷ ರೂಪಾಯಿವರೆಗೆ ಮನ್ನಾ ಮಾಡಲಾಗುವುದು ಎಂದು ಕಮಲ್ ನಾಥ್ ತಿಳಿಸಿದ್ದಾರೆ.

ಸುಧಾರಣೆಗೆ ಸಂಬಂಧಿಸಿದ ಸಲಹೆಗಳನ್ನು ನಾನು ಸ್ವಾಗತಿಸುತ್ತೇನೆ. ಆದರೆ ಯಾರೊಬ್ಬರಿಗೂ ಮೊದಲು ಸತ್ಯ ಮತ್ತು ಅಂಕಿ ಅಂಶಗಳನ್ನು ತಿಳಿದುಕೊಂಡಿರುವುದಿಲ್ಲ ಎಂದರು.

ಮಧ್ಯ ಪ್ರದೇಶ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಿಲ್ಲ. ಇದುವರೆಗೆ ಕೇವಲ 50 ಸಾವಿರ ರೂಪಾಯಿ ಮಾತ್ರ ಮನ್ನಾ ಮಾಡಲಾಗಿದೆ. ಆದರೆ ಎರಡು ಲಕ್ಷ ರೂಪಾಯಿ ಮನ್ನಾ ಮಾಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಈ ಮುಂಚೆ ಸಿಂಧಿಯಾ ಹೇಳಿದ್ದರು. ಅಲ್ಲದೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com