ಮಹಾ ಚುನಾವಣೆಗೆ ಶಿವಸೇನಾ ಪ್ರಣಾಳಿಕೆ ಬಿಡುಗಡೆ, ವಿದ್ಯುತ್ ದರ ಕಡಿತ ಸೇರಿ ಹಲವು ಭರವಸೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಶಿವಸೇನಾ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ವಿದ್ಯುತ್ ದರ ಕಡಿತ ಹಾಗೂ 10 ರೂಪಾಯಿಗೆ ಗುಣಮಟ್ಟದ ಊಟ ನೀಡಲು..
ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಆದಿತ್ಯ ಠಾಕ್ರೆ, ಉದ್ಧವ್ ಠಾಕ್ರೆ
ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಆದಿತ್ಯ ಠಾಕ್ರೆ, ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಶಿವಸೇನಾ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ವಿದ್ಯುತ್ ದರ ಕಡಿತ ಹಾಗೂ 10 ರೂಪಾಯಿಗೆ ಗುಣಮಟ್ಟದ ಊಟ ನೀಡಲು ರಾಜ್ಯಾದ್ಯಂತ 1 ಸಾವಿರ ಭೋಜನಾಲಯ ಸ್ಥಾಪಿಸುವುದಾಗಿ ಭರವಸೆ ನೀಡಿದೆ.

300 ಯ್ಯುನಿಟ್ ಗಳ ವರೆಗೆ ಶೇ. 30ರಷ್ಟು ವಿದ್ಯುತ್ ದರ ಕಡಿತ, ಹಳ್ಳಿಗಳಿಗೆ ವಿಶೇಷ ಬಸ್ ಸೇವೆ, ಬಡ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ನೆರವು ರೈತರ ಸಾಲ ಮನ್ನಾ ಹಾಗೂ ರಸಗೊಬ್ಬ ಬೆಲೆ ನಿಗದಿ ಸೇರಿದಂತೆ ಹಲವು ಭರವಸೆಗಳನ್ನು ಶಿವಸೇನೆ ನೀಡಿದೆ.

ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರು, 10 ರೂಪಾಯಿಗೆ ಗುಣಮಟ್ಟದ ಊಟ ನೀಡುವುದಕ್ಕಾಗಿ ಮಹಾರಾಷ್ಟ್ರದ್ಯಂತ 1 ಸಾವಿರ ಬೋಜನಾಲಯ ಸ್ಥಾಪಿಸಲಾಗುವುದು. ಪ್ರತಿ ಜಿಲ್ಲೆಯಲ್ಲೂ ಕೇಂದ್ರೀಕೃತ ಅಡಿಗೆಮನೆಗಳಿರಲಿವೆ ಮತ್ತು ಇಲ್ಲಿ ಮಹಿಳೆಯರೇ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಶಿವಸೇನಾ ಮಿತ್ರ ಪಕ್ಷ ಬಿಜೆಪಿ ಇನ್ನೂ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲ. ಆದರೆ ಅಕ್ಟೋಬರ್ 7ರಂದು ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್-ಎನ್ ಸಿಪಿ ಮೈತ್ರಿಕೂಟ, ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೊತ್ತ ಕಡಿಮೆ ಮಾಡುವುದು ಹಾಗೂ ತಕ್ಷಣ ರೈತರ ಸಾಲ ಮನ್ನಾ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com