ಐಟಿ ದಾಳಿ ಖಂಡಿಸಿ ಕೇಂದ್ರ ವಿತ್ತ ಸಚಿವರ ನಿವಾಸದ ಮುಂದೆ ಯುವ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಕಾರ್ಯಕರ್ತರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧಿಕೃತ ನಿವಾಸದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರ, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಕಾರ್ಯಕರ್ತರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧಿಕೃತ ನಿವಾಸದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

ಪೊಲೀಸರು ಸಫ್ದರ್ಜಂಗ್ ರಸ್ತೆಯನ್ನು ಬ್ಯಾರಿಕೇಡ್ ಬಳಸಿ ಬಂದ್ ಮಾಡಿ, ಪ್ರತಿಭಟನಾಕಾರರನ್ನು ದಾರಿಯಲ್ಲಿಯೇ ವಶಕ್ಕೆ ಪಡೆದರು.

ಕಾಂಗ್ರೆಸ್ ನಾಯಕರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲು ಪ್ರಾರಂಭಿಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಆಡಳಿತದ ಎಲ್ಲ ಕ್ಷೇತ್ರಗಳಲ್ಲಿಯೂ ಮೋದಿ-ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಅದಕ್ಕಾಗಿಯೇ ಅವರು ಕಾಂಗ್ರೆಸ್ ಪ್ರಮುಖ ನಾಯಕರ ವಿರುದ್ಧ ಐಟಿ, ಸಿಬಿಐ ಮತ್ತು ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಘೋಷಣೆ ಕೂಗಿದರು.

ಐವೈಸಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಬಿ.ವಿ ಮಾತನಾಡಿ, ಬಿಜೆಪಿ ಇಂತಹ ಕೀಳುಮಟ್ಟಕ್ಕೆ ಇಳಿಯುವುದನ್ನು ನಿಲ್ಲಿಸಬೇಕಾಗಿದೆ. ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸುವುದು ಸರಿಯಲ್ಲ ಎಂದರು.

ನಾವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ, ಇಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ರಾಜಕೀಯ ಮಾರ್ಗವನ್ನು ಆಯ್ಕೆ ಮಾಡಲು ಸ್ವಾತಂತ್ರ್ಯವನ್ನು ಹೊಂದಿದ್ದಾನೆ ಎಂದು ಶ್ರೀನಿವಾಸ್ ಹೇಳಿದರು.

ರಾಜ್ಯದಲ್ಲೂ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮುಂದುವರೆದಿದ್ದು, ಎರಡು ದಿನಗಳಿಂದ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ನಿವಾಸ ಹಾಗೂ ಅವರಿಗೆ ಸೇರಿದ ವೈದ್ಯಕೀಯ ಕಾಲೇಜ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಐಟಿ ದಾಳಿಗೆ ಬೆದರಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅವರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com