ಪ.ಬಂಗಾಳ: ಮತ್ತೋರ್ವ ಬಿಜೆಪಿ ಮುಖಂಡನ ಬರ್ಬರ ಹತ್ಯೆ, ಟಿಎಂಸಿ ಕೈವಾಡ ಆರೋಪ

ಪಶ್ಚಿಮ ಬಂಗಾಳದಲ್ಲಿ ಮತ್ತೆ ಹತ್ಯಾ ರಾಜಕೀಯ ಶುರುವಾಗಿದ್ದು, ಇದೀಗ ಮತ್ತೋರ್ವ ರಾಜಕೀಯ ಮುಖಂಡನನ್ನು ಹತ್ಯೆ ಮಾಡಲಾಗಿದೆ.

Published: 13th October 2019 11:17 AM  |   Last Updated: 13th October 2019 11:17 AM   |  A+A-


Another BJP workers shot dead in West Bengal

ಸಂಗ್ರಹ ಚಿತ್ರ

Posted By : Srinivasamurthy VN
Source : ANI

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಹತ್ಯಾ ರಾಜಕೀಯ ಶುರುವಾಗಿದ್ದು, ಇದೀಗ ಮತ್ತೋರ್ವ ರಾಜಕೀಯ ಮುಖಂಡನನ್ನು ಹತ್ಯೆ ಮಾಡಲಾಗಿದೆ.

ಬಿಜೆಪಿ ಹರಲಾ ದೇಬ್ ನಾಥ್(55 ವರ್ಷ)ರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ದಿನಸಿ ವ್ಯಾಪಾರಿಯಾಗಿದ್ದ ದೇಬ್ ನಾಥ್, ರಾತ್ರಿ  10 ಗಂಟೆಯ ವೇಳೆಯಲ್ಲಿ ತಮ್ಮ ಪತ್ನಿಯೊಂದಿಗೆ ಅಂಗಡಿಯಲ್ಲಿದ್ದರು. ಈ ವೇಳೆ ವ್ಯಾಪಾರಕ್ಕೆಂದು ಬಂದಿದ್ದ ಇಬ್ಬರು  ಏಕಾಏಕಿ ಗುಂಡು ಹಾರಿಸಿದ್ದಾರೆ. ಪತ್ನಿ ಎದುರಲ್ಲೇ ದೇಬ್ ನಾಥ್ ಕೊನೆಯುಸಿರೆಳೆದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡ್ಯೊಯ್ಯಲಾಯಿತಾದರೂ ಉಳಿಸಿಕೊಳ್ಳಲಾಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕೃತ್ಯದ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ. ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಡಿಯಾ ಬಿಜೆಪಿ ಜಿಲ್ಲಾಧ್ಯಕ್ಷ ಆರೋಪಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll

ಎನ್‌ಡಿಎ ಆಡಳಿತದಲ್ಲಿ ಭಯೋತ್ಪಾದಕ ದಾಳಿಯಿಂದ ಭಾರತ ಸುರಕ್ಷಿತವಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp