ಆಂಧ್ರ ಪ್ರದೇಶ ಸಿಎಂ ಜಗನ್ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.
Published: 13th October 2019 08:56 AM | Last Updated: 13th October 2019 08:56 AM | A+A A-

ಸಂಗ್ರಹ ಚಿತ್ರ
ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.
ಪಕ್ಷದ ಸಭೆಯೊಂದರಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಜಗನ್ ಮಾನಸಿಕ ಅಸ್ವಸ್ಥರಾಗಿದ್ದಾರೆ. ರಾಜ್ಯ ಸರ್ಕಾರವು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ವೈಎಸ್ಆರ್ಸಿಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಇತರ ಪಕ್ಷಗಳ ಮುಖಂಡರ ಮೇಲೆ ಅನಗತ್ಯ ಮತ್ತು ಕಾನೂನು ಬಾಹಿರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಪೊಲೀಸರು ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ನಾನು ಒಳ್ಳೆಯವರಿಗೆ ಒಳ್ಳೆಯವನು. ಆದರೆ ಜಗನ್ ಸೈಕೋನಂತೆ ವರ್ತಿಸುತ್ತಿದ್ದಾರೆ ಎಂದು ನಾಯ್ಡು ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು.
"ವೈಎಸ್ಆರ್ಸಿಪಿ ಪಕ್ಷದ ನಾಯಕರು ರಾಜ್ಯದಲ್ಲಿ 'ಜೆ ಟ್ಯಾಕ್ಸ್' (ಜಗನ್ ತೆರಿಗೆ) ವಸೂಲಿ ಮಾಡುತ್ತಿದ್ದಾರೆ. ನಾನು ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಇವರಂತಹ ಸೈಕೋ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಸರ್ಕಾರ ತನ್ನ ಸೊಕ್ಕಿನ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕೆಂದು ನಾನು ಎಚ್ಚರಿಸುತ್ತೇನೆ. ಈ ಸರ್ಕಾರ ನಮ್ಮ ಪಕ್ಷದ ಮುಖಂಡರನ್ನು ಗುರಿಯಾಗಿಸಿಕೊಂಡಿದೆ. ಅದು ನ್ಯಾಯ ಸಮ್ಮತವಲ್ಲ 'ಎಂದು ನಾಯ್ಡು ಹೇಳಿದರು.