ಆಯುಷ್ಮಾನ್ ಭಾರತ್ ಯೋಜನೆಯಡಿ 50 ಲಕ್ಷ  ಮಂದಿಗೆ ಪ್ರಯೋಜನವಾಗಿದೆ: ಪ್ರಧಾನಿ ಮೋದಿ

ಆಯುಷ್ಮಾನ್ ಭಾರತ್ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನ ನೀಡುವ ಮೂಲಕ ಭಾರತ ಪ್ರಮುಖ ಮೈಲಿಗಲ್ಲು ಸಾಧಿಸಿದೆ.

Published: 15th October 2019 01:39 PM  |   Last Updated: 15th October 2019 02:41 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : UNI

ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನ ನೀಡುವ ಮೂಲಕ ಭಾರತ ಪ್ರಮುಖ ಮೈಲಿಗಲ್ಲು ಸಾಧಿಸಿದೆ. ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಕೈಗೊಂಡ ಈ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶ್ಲಾಘಿಸಿದ್ದಾರೆ.


ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, "ಆರೋಗ್ಯಕರ ಭಾರತವನ್ನು ಕಟ್ಟುವ ಪ್ರಯಾಣದಲ್ಲಿ ಒಂದು ಪ್ರಮುಖ ಮೈಲಿಗಲ್ಲು! ಒಂದು ವರ್ಷದಲ್ಲಿ 50 ಲಕ್ಷಕ್ಕೂ ಹೆಚ್ಚು ನಾಗರಿಕರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಲಾಭವನ್ನು ಪಡೆದಿರುವುದು ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆ ತರುತ್ತದೆ ಎಂದು ತಿಳಿಸಿದ್ದಾರೆ.


ಗುಣಪಡಿಸುವುದರ ಹೊರತಾಗಿ, ಈ ಯೋಜನೆಯು ಹಲವಾರು ಭಾರತೀಯರನ್ನು ಸಬಲೀಕರಣಗೊಳಿಸುತ್ತಿದೆ ಎಂದು ಅವರು ಹೇಳಿದರು.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp