ಭೀಮಾ ಕೋರೆಗಾಂವ್ ಪ್ರಕರಣ: ಮೂವರು ಹೋರಾಟಗಾರರ ಜಾಮೀನು ಅರ್ಜಿ ತಿರಸ್ಕಾರ

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸ್ ವಶದಲ್ಲಿರುವ ಮೂವರು ಹೋರಾಟಗಾರರ ಜಾಮೀನು ಅರ್ಜಿಯಲ್ಲಿ ಬಾಂಬೇ ಹೈಕೋರ್ಟ್ ತಿರಸ್ಕರಿಸಿದೆ.
ಭೀಮಾ ಕೋರೆಗಾಂವ್ ಪ್ರಕರಣ: ಮೂವರು ಹೋರಾಟಗಾರರ ಜಾಮೀನು ಅರ್ಜಿ ತಿರಸ್ಕಾರ

ಮುಂಬೈ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸ್ ವಶದಲ್ಲಿರುವ ಮೂವರು ಹೋರಾಟಗಾರರ ಜಾಮೀನು ಅರ್ಜಿಯಲ್ಲಿ ಬಾಂಬೇ ಹೈಕೋರ್ಟ್ ತಿರಸ್ಕರಿಸಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಹಿಂಸಾಚಾರಕ್ಕೆ ಕುಮ್ಮುಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮೂವರು ನಾಗರಿಕ ಸ್ವಾತಂತ್ರ್ಯ ಹೋರಾಟಗಾರರ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಹೋರಾಟಗಾರರಾದ ಸುಧಾ ಭಾರದ್ವಾಜ್, ಅರುಣ್ ಫೆರಿಯೆರಾ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಾರಂಗ್ ಕೊಟ್ವಾಲ್ ಅವರು, ಸರ್ಕಾರಿ ಪರ ವಕೀಲರ ವಾದಕ್ಕೆ ಮನ್ನಣೆ ನೀಡಿ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಪ್ರಕರಣದಲ್ಲಿ ಈ ಮೂವರು ಹೋರಾಟಗಾರರು ಮಾವೋವಾದಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಹಿಂಸಾಚಾರಕ್ಕೆ ಪ್ರೇರಣೆ ನೀಡಿದರು ಎಂಬ ಗಂಭೀರ ಆರೋಪವಿದೆ. ಇದೇ ಅಂಶದ ಆಧಾರದ ಮೇರೆಗೆ ಸರ್ಕಾರಿ ಪರ ವಕೀಲರು ವಾದ ಮಂಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com