ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 17ಕ್ಕೆ ಮುಂದೂಡಿಕೆ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 17ಕ್ಕೆ ಮುಂದೂಡಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 17ಕ್ಕೆ ಮುಂದೂಡಿದೆ.

ಜಾಮೀನು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣೆಯನ್ನು ಗುರುವಾರ ಮಧ್ಯಾಹ್ನ 3.30ಕ್ಕೆ ಮುಂದೂಡಿದೆ.

ಇಂದು ಡಿಕೆ ಶಿವಕುಮಾರ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು, ಡಿಕೆ ಶಿವಕುಮಾರ್ 7 ಬಾರಿ ಶಾಸಕರಾಗಿದ್ದವರು. ಅವರು ವಿಚಾರಣೆಯಿಂದ ತಪ್ಪಿಸಿಕೊಳ್ಳುವುದಿಲ್ಲ. ಅವರನ್ನು ಬಂಧಿಸುವುದಕ್ಕೂ ಮುನ್ನ 4 ದಿನಗಳ ಕಾಲ 35 ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿದೆ. ಬಳಿಕ 45 ದಿನಗಳ ಕಾಲ ಕಸ್ಟಡಿಯಲ್ಲಿ ಇಡಲಾಗಿದೆ. ಇದು ಬಂಧಿಸುವಂತಹ ಪ್ರಕರಣವೇ ಅಲ್ಲ ಎಂದು ವಾದಿಸಿದರು.

ಇದಕ್ಕೂ ಮುನ್ನ ಸುಪ್ರೀಂಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ಡಿಕೆಶಿಯನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿದೆ. ಅಲ್ಲದೆ ಆದಾಯ ತೆರಿಗೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 120ಬಿ ಶೆಡ್ಯೂಲ್‌ನಡಿ ಕೇಸ್‌ ದಾಖಲಿಸಲು ಬರಲ್ಲ. ಐಟಿ ಕಾಯ್ದೆಯಡಿ ಅನವಶ್ಯಕವಾಗಿ ಕಸ್ಟಡಿಗೆ ತೆಗೆದುಕೊಳ್ಳುವಂತೆಯೂ ಇಲ್ಲ ಎಂದು ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು.

ಈ ಮಧ್ಯೆ, ದೆಹಲಿ ವಿಶೇಷ ಕೋರ್ಟ್ ಡಿಕೆಶಿ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 10 ದಿನಗಳ ಕಾಲ ಆದೇಶ ನೀಡಿದ್ದು, ಆರೋಪಿಯನ್ನು  ಈ ತಿಂಗಳ 25ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. 

ರೋಸ್ ಅವೆನ್ಯೂ ಕೋರ್ಟ್ ಡಿಕೆಶಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಕಾನೂನು ಸಮರ ಮುಂದುವರೆಸಿದ್ದು, ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com