ಡಿಕೆಶಿಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನ: ಕೂರಲು ಕುರ್ಚಿ ಕೇಳಿದ ಶಿವಕುಮಾರ್

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್​ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
ಶಿವಕುಮಾರ್
ಶಿವಕುಮಾರ್

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್​ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ಇಂದು ಇಡಿ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಇದಾದ ಬಳಿಕ ದೆಹಲಿ ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಅ. 25ರವರೆಗೆ ಡಿಕೆಶಿ ಇಡಿ ಅಧಿಕಾರಿಗಳ ವಶದಲ್ಲಿರಬೇಕಾಗುತ್ತದೆ. ಒಂದುವೇಳೆ ಹೈಕೋರ್ಟ್​ನಲ್ಲಿ ಜಾಮೀನು ಸಿಕ್ಕರೆ ಡಿಕೆ ಶಿವಕುಮಾರ್ ಅವರಿಗೆ ನಿರಾಳವಾಗಲಿದೆ.

ಕಾಂಗ್ರೆಸ್​ಟ್ರಬಲ್​ಶೂಟರ್​ಪರವಾಗಿ ದೆಹಲಿ ಹೈಕೋರ್ಟ್​ನಲ್ಲಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಾಡಲಿದ್ದಾರೆ. ನಿನ್ನೆ ಕಾಂಗ್ರೆಸ್​ ಟ್ರಬಲ್ ಶೂಟರ್​​ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿತ್ತು. ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕಸದಸ್ಯ ಪೀಠ ತೀರ್ಪು ನೀಡಿ ಇಂದಿಗೆ ಮುಂದೂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com