ಕಾಶ್ಮೀರದಲ್ಲಿ ಪ್ರತಿಭಟನೆ: ಫಾರೂಖ್ ಅಬ್ದುಲ್ಲಾ ಸಹೋದರಿ, ಮಗಳ ಬಂಧನ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ ಸಹೋದರಿ ಹಾಗೂ ಪುತ್ರಿ ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಫಾರೂಖ್ ಸಹೋದರಿ
ಫಾರೂಖ್ ಸಹೋದರಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ ಸಹೋದರಿ ಹಾಗೂ ಪುತ್ರಿ ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಮಹಿಳಾ ಕಾರ್ಯಕರ್ತರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಬ್ದುಲ್ಲಾ ಅವರ ಸಹೋದರಿ ಸುರೈಯ ಮತ್ತು ಅವರ ಪುತ್ರಿ ಸಫಿಯಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದು ಹಾಗೂ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. 

ಮಹಿಳೆಯರು ರಸ್ತೆಯಲ್ಲೇ ಧರಣಿ ನಡೆಸಲು ಮುಂದಾದಾಗ ಸಿಆರ್ ಪಿಎಫ್ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com