ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೊರೆಹೋದ ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮಂಗಳವಾರ ತಮಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Published: 15th October 2019 04:41 PM  |   Last Updated: 15th October 2019 04:41 PM   |  A+A-


ಪಿ.ಚಿದಂಬರಂ

Posted By : Raghavendra Adiga
Source : PTI

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮಂಗಳವಾರ ತಮಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಚಿದಂಬರಂ ಅಥವಾ ಅವರ ಕುಟುಂಬ ಸದಸ್ಯರು ಈ ಪ್ರಕರಣದಲ್ಲಿ ಯಾವುದೇ ಸಾಕ್ಷಿಯನ್ನು ಸಂಪರ್ಕಿಸಲು ಅಥವಾ ಪ್ರಭಾವಿಸಲು ಪ್ರಯತ್ನಿಸಿದ ಬಗ್ಗೆ ಯಾವುದೇ ಆರೋಪಗಳಿಲ್ಲ ಎಂದು ಚಿದಂಬರಂ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಗ್ವಿ ನ್ಯಾಯಮೂರ್ತಿ ಆರ್ ಬಾನುಮತಿ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದರು.

ಹಣದ ನಷ್ಟವಾಗಲಿ, ಹಣದ ಸಿಫೋನಿಂಗ್ ಆರೋಪಗಳಾಗಲಿ ಚಿದಂಬರಂ ಹಾಗೂ ಅವರ ಕುಟುಂಬದ ಮೇಲಿಲ್ಲ ಎಂದು ಅವರ ಪರ ವಕೀಲರು ಸುಪ್ರೀಂಗೆ ತಿಳಿಸಿದ್ದಾರೆ. 

ಸೆಪ್ಟೆಂಬರ್ 30 ರಂದು ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್‌ನ ತೀರ್ಪನ್ನು ಅವರು ಪ್ರಶ್ನಿಸಿದ್ದಾರೆ. ಜಾಮೀನು ಅರ್ಜಿಯನ್ನು ನಿರ್ಧರಿಸುವಾಗ ಪ್ರಕರಣದ ಯೋಗ್ಯತೆಗಳನ್ನು  ಉಲ್ಲೇಖಿಸುವಂತಿಲ್ಲ ಎಂದು ಅವರು ವಾದಿಸಿದ್ದಾರೆ.

ಇನ್ನು ಸಿಬಿಐ ಪರ ವಕೀಲರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದವನ್ನು ನ್ಯಾಯಾಲಯ ಬುಧವಾರ ಆಲಿಸಲಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp