ಮಹಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಸಾವರ್ಕರ್​ಗೆ ಭಾರತ ರತ್ನ, 1 ಕೋಟಿ ಉದ್ಯೋಗ ಭರವಸೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಇಂದು ಬಿಜೆಪಿ ಕಾರ್ಯಾದ್ಯಕ್ಷ ಜೆ.ಪಿ. ನಡ್ಡಾ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಸಮಾಜ ಸುಧಾರಕ ದಾಮೋದರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು, ಮುಂದಿನ ಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿ ಹಾಗೂ ಮಹಾರಾಷ್ಟ್ರದ ಬರ, ನಿರುದ್ಯೋಗ ಮತ್ತು ವಿದ್ಯುತ್ ಸಮಸ್ಯೆಗೆ ಪರಿಣಾಮಕಾರಿ ಪರಿಹಾರ ಒದಗಿಸುವ ಭರವಸೆ ನೀಡಲಾಗಿದೆ.

ಇದೇ ವೇಳೆ ಮಾತನಾಡಿದ ಬಿಜೆಪಿ ಕಾರ್ಯಾದ್ಯಕ್ಷ ಜೆ.ಪಿ. ನಡ್ಡಾ ಅವರು, ಬಹಳ ಮುತುವರ್ಜಿಯಿಂದ ಪಕ್ಷದ ಪ್ರಣಾಳಿಕೆ ತಯಾರಿಸಲಾಗಿದೆ ಎಂದು ಬಣ್ಣಿಸಿದರು.

ಐದು ವರ್ಷಗಳ ಹಿಂದೆ ಮಹಾರಾಷ್ಟ್ರ ರಾಜ್ಯಕ್ಕೆ ಕಳಂಕ ಮೆತ್ತಿಕೊಂಡಿತ್ತು. ಭ್ರಷ್ಟಾಚಾರ ತುಂಬಿ ತುಳುಕಿತ್ತು. ರಾಜಕೀಯ ಅಸ್ಥಿರತೆ ನೆಲಸಿದ್ದ ಇಲ್ಲಿ ಸಿಎಂ ಸ್ಥಾನವು ಮ್ಯೂಸಿಕಲ್ ಚೇರ್​ನಂತಾಗಿ ಹೋಗಿತ್ತು. ಈಗ ಕಳೆದ 5 ವರ್ಷದಲ್ಲಿ ಮಹಾರಾಷ್ಟ್ರದಲ್ಲಿ ಭ್ರಷ್ಟಾಚಾರ ಅಂತ್ಯವಾಗಿದೆ. ಸ್ಥಿರ ಸರ್ಕಾರದಿಂದ ರಾಜ್ಯ ಅಭಿವೃದ್ಧಿ ಪಥದಲ್ಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com