ಅಭಿಜಿತ್ ಹೊಗಳಿ ಮೋದಿಯನ್ನು ಟೀಕಿಸಿದ ರಾಹುಲ್ ವಿರುದ್ಧ ಮುಗಿಬಿದ್ದ ಬಿಜೆಪಿ 

ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರನ್ನು ಅಭಿನಂದಿಸಿ ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ   ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರನ್ನು ಅಭಿನಂದಿಸಿ ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ   ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಭಾರತೀಯ - ಅಮೆರಿಕಾ ಮೂಲದ ಅಭಿಜಿತ್ ಬ್ಯಾನರ್ಜಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ  ನ್ಯಾಯ ಪರಿಕಲ್ಪನೆಗೆ ಸಹಾಯ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. 

"ಬಡತನವನ್ನು ನಾಶಮಾಡುವ ಮತ್ತು ಭಾರತೀಯ ಆರ್ಥಿಕತೆಯನ್ನು ಹೆಚ್ಚಿಸುವ ಶಕ್ತಿಯನ್ನು ಹೊಂದಿರುವ ನ್ಯಾಯ ಪರಿಕಲ್ಪನೆಗೆ ಅಭಿಜಿತ್ ಸಹಾಯ ಮಾಡಿದ್ದಾರೆ. ಆದರೆ, ಈಗ ನಾವು ಹೊಂದಿರುವ ಮೋದಿನಾಮಿಕ್ಸ್ , ಆರ್ಥಿಕತೆಯನ್ನು ನಾಶಪಡಿಸುತ್ತದೆ, ಬಡತನವನ್ನು ಹೆಚ್ಚಿಸುತ್ತದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇದಕ್ಕೆ ಕ್ಷಿಪ್ರಗತಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ, ಬ್ಯಾನರ್ಜಿ ವಿಮರ್ಶಕೆಂದು ತಿಳಿದಿದ್ದರೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ರೀತಿಯ ಬೇರೆ ರೀತಿಯ ಆಲೋಚನೆಗಳಿಲ್ಲದೆ ಅಭಿನಂದಿಸಿದ್ದಾರೆ. ಆದರೆ, ರಾಹುಲ್ ಗಾಂಧಿ, ನೊಬೆಲ್ ಪ್ರಶಸ್ತಿಯನ್ನು ರಾಜಕೀಯಗೊಳಿಸುತ್ತಿರುವುದರ ಜೊತೆಗೆ ಪ್ರಧಾನಿ ಮೋದಿ ವಿರುದ್ಧ ದಾಳಿಗೆ ಬಳಸಿಕೊಂಡಿದ್ದಾರೆ. ಇದು ಕಠಿಣವೆಂದು ನನಗೆ ತಿಳಿದಿದೆ ಆದರೆ ರಾಹುಲ್ ಎಂದಾದರೂ ಘನತೆಯನ್ನು ಕಲಿಯುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. 

ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಮಾಡಿರುವ ಅಭಿನಂದನಾ ಸಂದೇಶಗಳ ಸ್ಕ್ರೀನ್ ಶಾಟ್ ಗಳನ್ನು ಮಾಳವಿಯಾ ಪೋಸ್ಟ್ ಮಾಡಿದ್ದಾರೆ.


"ಆಲ್ಫ್ರೆಡ್ ನೊಬೆಲ್ ಅವರ ಸ್ಮರಣೆಯಲ್ಲಿ ಅರ್ಥಶಾಸ್ತ್ರದಲ್ಲಿ 2019 ರ ಸ್ವೆರಿಜಸ್  ರಿಕ್ಸ್‌ಬ್ಯಾಂಕ್ ಪ್ರಶಸ್ತಿಯನ್ನು  ಪಡೆದ ಅಭಿಜಿತ್ ಬ್ಯಾನರ್ಜಿಗೆ ಅಭಿನಂದನೆಗಳು. ಬಡತನ ನಿವಾರಣಾ ಕ್ಷೇತ್ರದಲ್ಲಿ ಅವರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com