ಬ್ರೇಕಿಂಗ್: ಅಯೋಧ್ಯೆ ಪ್ರಕರಣ ಹಿಂಪಡೆಯಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ!

ಪ್ರಮುಖ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್‌ ನಲ್ಲಿ ಅಯೋಧ್ಯೆ ಪ್ರಕರಣದ ಅಂತಿಮ ವಿಚಾರಣೆ ನಡೆಯುತ್ತಿರುವಂತೆಯೇ ಇತ್ತ ಸುನ್ನಿ ವಕ್ಫ್ ಬೋರ್ಡ್ ತಾನು ಸಲ್ಲಿಸಿದ್ದ ಪ್ರಕರಣವನ್ನು ಹಿಂಪೆಯಲು ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್‌ ನಲ್ಲಿ ಅಯೋಧ್ಯೆ ಪ್ರಕರಣದ ಅಂತಿಮ ವಿಚಾರಣೆ ನಡೆಯುತ್ತಿರುವಂತೆಯೇ ಇತ್ತ ಸುನ್ನಿ ವಕ್ಫ್ ಬೋರ್ಡ್ ತಾನು ಸಲ್ಲಿಸಿದ್ದ ಪ್ರಕರಣವನ್ನು ಹಿಂಪೆಯಲು ನಿರ್ಧರಿಸಿದೆ.

ಈ ಕುರಿತಂತೆ ಮಂಡಳಿಯ ಅಧ್ಯಕ್ಷರು ಹಾಗೂ ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈ ಕುರಿತಂತೆ ಇಂದು ಅಂತಿಮ ವಿಚಾರಣೆ ಆರಂಭವಾಗಿದ್ದು,  ಸುನ್ನಿ ವಕ್ಫ್ ಮಂಡಳಿಯ ಮೇಲ್ಮನವಿ ಹಿಂಪಡೆಯುವ ಬಗ್ಗೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. 

ಇನ್ನು ಸಂಜೆ ಐದು ಗಂಟೆಯೊಳಗೆ ಪ್ರಕರಣದ ವಿಚಾರಣೆ ಮುಕ್ತಾಯವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಸ್ಪಷ್ಟಪಡಿಸಿದ್ದು, ನಿರ್ಧರಿಸಿದ ಪಕ್ಷಗಳನ್ನು ಹೊರತುಪಡಿಸಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶ ನೀಡಲು ಮುಖ್ಯ ನ್ಯಾಯಮೂರ್ತಿ ನಿರಾಕರಿಸಿದ್ದಾರೆ. 

ವಾಸ್ತವವಾಗಿ, ವಕೀಲರು ಹೆಚ್ಚುವರಿ ಸಮಯವನ್ನು ಕೇಳಿದ್ದರು. ಆದರೆ ಈ ಕುರಿತು ಪ್ರತಿಕ್ರಿಯಿಸಿದ ಸಿಜೆಐ ಅಯೋಧ್ಯೆ ಪ್ರಕರಣದ ವಿಚಾರಣೆ ಇಂದು ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ. ಹೀಗಾಗಿ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವಂತೆ ವಕೀಲರು ಮನವಿ ಮಾಡಿದ ಮನವಿಯನ್ನು ಸಿಜೆಐ ವಜಾಗೊಳಿಸಿದರು. ಆದರೆ ಸುನ್ನಿ ವಕ್ಫ್ ಮಂಡಳಿ ಮನವಿಯನ್ನು ಹಿಂಪಡೆಯುವ ಬಗ್ಗೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com