ಕಾಂಗ್ರೆಸ್ ಕಾಶ್ಮೀರವನ್ನು ಅಂತರಾಷ್ಟ್ರೀಯ ವಿಚಾರವನ್ನಾಗಿ ಮಾಡುತ್ತಿದೆ: ರಾಜನಾಥ್ ಸಿಂಗ್

ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ಇದನ್ನು ಅಂತರಾಷ್ಟ್ರೀಯ ವಿಚಾರ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿರಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ಬವಾನಿ ಖೇರಾ (ಹರಿಯಾಣ): ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ಇದನ್ನು ಅಂತರಾಷ್ಟ್ರೀಯ ವಿಚಾರ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿರಿದ್ದಾರೆ. 

ಲೇಬರ್ ಪಕ್ಷದ ಮುಖಂಡ ಜೆರೆಮಿ ಕಾರ್ಬಿನ್ ಮತ್ತು ಲಂಡನ್ ನಲ್ಲಿರುವ ಕಾಂಗ್ರೆಸ್ ಪ್ರತಿನಿಧಿಗಳೊಂದಿಗೆ ಸಭೆಯೊಂದು ನಡೆದಿದ್ದು, ಸಭೆಯಲ್ಲಿ ಕಾಶ್ಮೀರದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿದೆ ಎಂದು ಚರ್ಚಿಸಲಾಗಿದೆ. ಕಾಂಗ್ರೆಸ್ ಸುಖಾಸುಮ್ಮನೆ ಕಾಶ್ಮೀರ ವಿಚಾರವನ್ನು ಅಂತರಾಷ್ಟ್ರೀಯ ವಿಚಾರವಾಗಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

ಕಾಶ್ಮೀರದಲ್ಲಿ ಎಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿದೆ ಎಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕರು ಉತ್ತರ ನೀಡಬೇಕು. ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಿದಾಗ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿದೆ. ಆ ಸಮಯದಲ್ಲೇಕೆ ನೀವು ಈ ಬಗ್ಗೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ನಮ್ಮ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ನೀಡಬೇಕು. ಇತರ ದೇಶಗಳ ಈ ಬಗ್ಗೆ ಚರ್ಚೆ ನಡೆಯುತ್ತಿದೆಯೇ? ಇತರೆ ದೇಶಗಳೊಂದಿಗೆ ಕಾಶ್ಮೀರ ವಿಚಾರ ಕುರಿತು ಚರ್ಚೆ ನಡೆಸುತ್ತೀರಾ?... ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹಲವಾರು ಮಂದಿಯ ಪ್ರಾಣ ಹೋಗಿದೆ. ಈ ವಿಚಾರ ಸಂಬಂಧ ಕಾಂಗ್ರೆಸ್ ಗಮನ ಹರಿಸುತ್ತಿಲ್ಲ. ಕಾಂಗ್ರೆಸ್ ನಾಯಕರು ವಿಚಿತ್ರವಾದ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದ್ದಾರೆ. ಅವರಿಗೆ ಏನಾಗಿದೆ? ಕಾಂಗ್ರೆಸ್ ನಾಯಕರು ಮಾನಸಿಕವಾಗಿ ಅಸ್ವಸ್ಥರಾಗಿರುವಂತೆ ಕಾಣುತ್ತಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com