ಜಮ್ಮು-ಕಾಶ್ಮೀರ: ನೆರೆ ರಾಜ್ಯದ ಜನರೇ ಉಗ್ರರ ಟಾರ್ಗೆಟ್

ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಇತರ ರಾಜ್ಯದವರಿಗೂ ಕಣಿವೆ ರಾಜ್ಯದಲ್ಲಿ ಭೂಮಿ ಸಂಪಾದಿಸುವ ಮತ್ತು ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದ ಬೆನ್ನಲ್ಲೇ, ಇದರ ರಾಜ್ಯದ ಪ್ರಜೆಗಳನ್ನು ಉಗ್ರರು ಹುಡುಕಿ ಭೀಕರವಾಗಿ ಹತ್ಯೆ ಮಾಡುತ್ತಿರುವ ಆತಂಕಕಾರಿ ಬೆಳವಣಿಗೆಗಳು ಕಂಡು ಬರುತ್ತಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಇತರ ರಾಜ್ಯದವರಿಗೂ ಕಣಿವೆ ರಾಜ್ಯದಲ್ಲಿ ಭೂಮಿ ಸಂಪಾದಿಸುವ ಮತ್ತು ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದ ಬೆನ್ನಲ್ಲೇ, ಇದರ ರಾಜ್ಯದ ಪ್ರಜೆಗಳನ್ನು ಉಗ್ರರು ಹುಡುಕಿ ಭೀಕರವಾಗಿ ಹತ್ಯೆ ಮಾಡುತ್ತಿರುವ ಆತಂಕಕಾರಿ ಬೆಳವಣಿಗೆಗಳು ಕಂಡು ಬರುತ್ತಿವೆ. 

ಸೋಮವಾರವಷ್ಟೇ ರಾಜಸ್ಥಾನ ಮೂಲದ ಟ್ರಕ್ ಚಾಲಕರೊಬ್ಬರನ್ನು ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದರು. 

ಬುಧವಾರ ಮತ್ತೆ ಶೋಪಿಯಾನ್ ನಲ್ಲಿಯೇ ಪ್ರತ್ಯೇಕ ಘಟನೆಗಳಲ್ಲಿ ಪಂಬಾಬ್ ಮೂಲದ ಸೇಬು ಹಣ್ಣು ಮಾರಾಟಗಾರ ಮತ್ತು ಛತ್ತೀಸ್ಗಢ ಮೂಲದ ದಿನಗೂಲಿ ಕಾರ್ಮಿಕರ ಮೇಲೆ ಉಗ್ರರು ಮಾರಣಾಂತಿಕ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. 

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬುಧವಾರ ಭಾರತೀಯ ಸೇನಾಪಡೆ, ಮೂವರು ಉಗ್ರರನ್ನು ಹತ್ಯೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com