ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರನ್ನು ನನ್ನ ಉತ್ತರಾಧಿಕಾರಿಯಾಗಿ ನೇಮಿಸಿ: ಸಿಜೆಐ ರಂಜನ್ ಗೊಗೊಯ್ ಶಿಫಾರಸು 

ಸುಪ್ರೀಂ ಕೋರ್ಟ್ ನ ಅತ್ಯಂತ ಹಿರಿಯ ನ್ಯಾಯಾಧೀಶ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಬೇಕೆಂದು ಶಿಫಾರಸು ಮಾಡಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸಿಜೆಐ ರಂಜನ್ ಗೊಗೊಯ್ ಮತ್ತು ನ್ಯಾಯಾಧೀಶ ಎಸ್ ಎ ಬೊಬ್ಡೆ(ಸಂಗ್ರಹ ಚಿತ್ರ)
ಸಿಜೆಐ ರಂಜನ್ ಗೊಗೊಯ್ ಮತ್ತು ನ್ಯಾಯಾಧೀಶ ಎಸ್ ಎ ಬೊಬ್ಡೆ(ಸಂಗ್ರಹ ಚಿತ್ರ)

ನವದೆಹಲಿ: ಸುಪ್ರೀಂ ಕೋರ್ಟ್ ನ ಅತ್ಯಂತ ಹಿರಿಯ ನ್ಯಾಯಾಧೀಶ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಬೇಕೆಂದು ಶಿಫಾರಸು ಮಾಡಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.


ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಾಧೀಶ ಬೊಬ್ಡೆ ಅವರನ್ನು ನೇಮಕ ಮಾಡಬೇಕೆಂದು ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಸೂಚಿಸಿ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


ಸುಪ್ರೀಂ ಕೋರ್ಟ್ ನ 46ನೇ ಮುಖ್ಯ ನ್ಯಾಯಾಧೀಶರಾಗಿ ಕಳೆದ ವರ್ಷ ಅಕ್ಟೋಬರ್ 3ರಂದು ಅಧಿಕಾರ ಸ್ವೀಕರಿಸಿದ್ದ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಮುಂದಿನ ತಿಂಗಳು ನವೆಂಬರ್ 17ರಂದು ನಿವೃತ್ತಿಯಾಗಲಿದ್ದಾರೆ.


ನಿವೃತ್ತಿಯಾಗುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತಮ್ಮ ಮುಂದಿನ ಉತ್ತರಾಧಿಕಾರಿಯಾಗಬೇಕೆಂದು ಸೂಚಿಸುವ ಸಂಪ್ರದಾಯವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com