ಸೈನಿಕ ಶಾಲೆಗಳಿಗೆ ಬಾಲಕಿಯರ ಪ್ರವೇಶಕ್ಕೆ ರಕ್ಷಣಾ ಸಚಿವರ ಅನುಮತಿ

ಸೈನಿಕ್ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಪ್ರವೇಶಕ್ಕೆ ಅವಕಾಶ ನೀಡುವ ಪ್ರಸ್ತಾಪಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ.

Published: 18th October 2019 07:02 PM  |   Last Updated: 18th October 2019 07:02 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : UNI

ನವದೆಹಲಿ:  ಸೈನಿಕ್ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಪ್ರವೇಶಕ್ಕೆ ಅವಕಾಶ ನೀಡುವ ಪ್ರಸ್ತಾಪಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ.

ಎರಡು ವರ್ಷಗಳ ಹಿಂದೆ ಮಿಜೋರಾಂನ ಸೈನಿಕ್ ಸ್ಕೂಲ್ ಚಿಂಗ್‌ಶಿಪ್‌ನಲ್ಲಿ ಹೆಣ್ಣು ಮಕ್ಕಳನ್ನು ಪ್ರವೇಶಿಸಲು ರಕ್ಷಣಾ ಸಚಿವಾಲಯ ಪ್ರಾರಂಭಿಸಿದ ಪ್ರಾಯೋಗಿಕ ಯೋಜನೆಯ ಯಶಸ್ಸಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

ನಿರ್ದೇಶನವನ್ನು ಸುಗಮವಾಗಿ ಅನುಷ್ಠಾನಗೊಳಿಸಲು ಸೈನಿಕ್ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳ ಲಭ್ಯತೆ ಮತ್ತು ಸಾಕಷ್ಟು ಮಹಿಳಾ ಸಿಬ್ಬಂದಿಯನ್ನು ಖಚಿತಪಡಿಸಿಕೊಳ್ಳಲು ರಾಜನಾಥ್ ಸಿಂಗ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ನಿರ್ಧಾರವು ಹೆಚ್ಚಿನ ಒಳಗೊಳ್ಳುವಿಕೆ, ಲಿಂಗ ಸಮಾನತೆ, ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಗೆ ಅನುವು ನೀಡಲಿದೆ.  

ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಮಾಡಿದ ‘ಬೇಟಿ ಬಚಾವೊ ಬೇಟಿ ಪದಾವೊ’ ಧ್ಯೇಯವಾಕ್ಯವನ್ನು ಬಲಪಡಿಸುವ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp