ನೊಬೆಲ್‌ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ ಎಡ ಪಂಥೀಯ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಭಾರತದ ಆರ್ಥಿಕತೆ ಅತ್ಯಂತ ಶೋಚನೀಯವಾಗಿದೆ ಎಂದಿದ್ದ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್‌ ಸ್ಮಾರಕ ಪ್ರಶಸ್ತಿ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ ಎಡ ಪಂಥೀಯ ವಿಚಾರಧಾರೆ...
ಪಿಯೂಷ್ ಗೋಯಲ್
ಪಿಯೂಷ್ ಗೋಯಲ್

ಪುಣೆ: ಭಾರತದ ಆರ್ಥಿಕತೆ ಅತ್ಯಂತ ಶೋಚನೀಯವಾಗಿದೆ ಎಂದಿದ್ದ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್‌ ಸ್ಮಾರಕ ಪ್ರಶಸ್ತಿ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ ಎಡ ಪಂಥೀಯ ವಿಚಾರಧಾರೆ ಹೊಂದಿದ್ದಾರೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋಯಲ್, ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಅವರನ್ನು ನಾನು ಅಭಿನಂದಿಸುತ್ತೇನೆ. ಆದರೆ ಅವರು ಎಡ ಪಂಥೀಯ ವಿಚಾರಧಾರೆ ಹೊಂದರುವುದು ನಿಮಗೆಲ್ಲಾ ಗೊತ್ತು ಎಂದರು.

ಕಳೆದ ಲೋಕಸಭೆ ಚುನಾವಣೆ ವೇಳೆ ಅಭಿಜಿತ್ ಬ್ಯಾನರ್ಜಿ ಕಾಂಗ್ರೆಸ್ ನ  ನ್ಯಾಯ್(ಬಡವರಿಗೆ ಆರ್ಥಿಕ ಸಹಾಯ ಮಾಡುವ ಯೋಜನೆ) ಅನ್ನು ಬೆಂಬಲಿಸಿದ್ದರು. ಆದರೆ ದೇಶದ ಜನತೆ ಅದನ್ನು ತಿರಸ್ಕರಿಸಿದರು ಎಂದು ಕೇಂದ್ರ ಸಚಿವರು ಹೇಳಿದ್ದಾರೆ

ಇತ್ತೀಚಿಗೆ ನೊಬೆಲ್‌ ಪ್ರಶಸ್ತಿ ಪಡೆದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ್ದ ಬ್ಯಾನರ್ಜಿ, ಭಾರತದ ಆರ್ಥಿಕತೆ ಅತ್ಯಂತ ಶೋಚನೀಯವಾಗಿದ್ದು, ಸುಧಾರಿಸುವ ಯಾವುದೇ ಭರವಸೆಯೂ ಇಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com