ಕಾಂಗ್ರೆಸ್ - ಪಾಕಿಸ್ತಾನ ನಡುವಿನ ಕೆಮಿಸ್ಟ್ರಿ ಎಂತದ್ದು?: ಪ್ರಧಾನಿ ಮೋದಿ

ಕಾಂಗ್ರೆಸ್ ದುರಾಡಳಿತದ ಅವಧಿಯಲ್ಲಿ ಯೋಧರು, ರೈತರು ಹಾಗೂ ಕ್ರೀಡಾಪಟುಗಳು ಸೇರಿದಂತೆ ಯಾರೊಬ್ಬರೂ ಸುರಕ್ಷಿತವಾಗಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷದ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು.
ನರೇಂದ್ರ ಮೋದಿ
ನರೇಂದ್ರ ಮೋದಿ

ಗೋಹಾನ: ಕಾಂಗ್ರೆಸ್ ದುರಾಡಳಿತದ ಅವಧಿಯಲ್ಲಿ ಯೋಧರು, ರೈತರು ಹಾಗೂ ಕ್ರೀಡಾಪಟುಗಳು ಸೇರಿದಂತೆ ಯಾರೊಬ್ಬರೂ ಸುರಕ್ಷಿತವಾಗಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷದ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು.

ಹರಿಯಾಣದ ಗೋಹಾನದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಾಲಕೋಟ್ ವಾಯು ದಾಳಿ ಅಥವಾ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರ ನಿರ್ಧಾರ ಬೆಂಬಲಿಸಿದ ಕಾಂಗ್ರೆಸ್ ಮತ್ತು ಪಾಕಿಸ್ತಾನ ನಡುವಿನ ಕೆಮಿಸ್ಟ್ರಿ ಎಂತದ್ದು? ಎಂದು ಪ್ರಶ್ನಿಸಿದ್ದಾರೆ.

ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ಪ್ರಭಾವ ಬೀರಲು ಕಾಂಗ್ರೆಸ್ ಅನ್ನು ಬಳಸಿಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ನಾವು ಸ್ವಚ್ಛ ಭಾರತ ಅಥವಾ ಸರ್ಜಿಕಲ್ ಸ್ಟೈಕ್ ಬಗ್ಗೆ ಮಾತನಾಡಿದರೆ ಕಾಂಗ್ರೆಸ್ ಹೊಟ್ಟೆ ಉರಿ ಎಂದು ಪ್ರಧಾನಿ ಟೀಕಿಸಿದರು.

ಹರಿಯಾಣದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಕೃಷಿ, ಕ್ರೀಡೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com