ತಾಕತ್ತಿದ್ದರೆ ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಜಾರಿಗೊಳಿಸವುದಾಗಿ ಘೋಷಿಸಿ: ರಾಹುಲ್ ಗಾಂಧಿಗೆ ಅಮಿತ್ ಶಾ ಸವಾಲು

ತಾಕತ್ತಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸವಾಲು ಹಾಕಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನಂದುರ್ಬರ್: ತಾಕತ್ತಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸವಾಲು ಹಾಕಿದ್ದಾರೆ.

ಇಂದು ಮಹಾರಾಷ್ಟ್ರದ ಬುಡಕಟ್ಟು ಜಿಲ್ಲೆ ನಂದುರ್ಬರ್ ನಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ನರೇಂದ್ರ ಮೋದಿ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವುದು ನಮ್ಮ ಮೊದಲ ಆದ್ಯತೆಯಾಗಿತ್ತು ಎಂದರು.

ವಿಶೇಷ ಸ್ಥಾನಮಾನದಿಂದಾಗಿಯೇ ಪಾಕಿಸ್ತಾನ ಕಾಶ್ಮೀರದಲ್ಲಿ ಉಗ್ರರನ್ನು ಹುಟ್ಟು ಹಾಕುತ್ತಿತ್ತು ಮತ್ತು ಉಗ್ರರ ಕೃತ್ಯಗಳಿಂದಾಗಿ ಸುಮಾರು 40 ಸಾವಿರ ಜನ ಮೃತಪಟ್ಟಿದ್ದಾರೆ. ಅಲ್ಲದೆ 370ನೇ ವಿಧಿ ಕಣಿವೆ ರಾಜ್ಯದ ಅಭಿವೃದ್ಧಿ ಅಡ್ಡಿಯಾಗಿತ್ತು. ಹೀಗಾಗಿ ಅದನ್ನು ರದ್ದುಗೊಳಿಸಲಾಗಿದೆ. ಆದರೆ ಕಾಂಗ್ರೆಸ್ ಮತ ಬ್ಯಾಂಕ್ ಗಾಗಿ ಇದುವರೆಗೂ 370ನೇ ವಿಧಿ ರದ್ದುಗೊಳಿಸಿರಲಿಲ್ಲ. ಅವರಿಗೆ ರಾಷ್ಟ್ರೀಯ ಹಿತಾಸಕ್ತಿಗಿಂತ ಮತ ಬ್ಯಾಂಕ್ ಮುಖ್ಯ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಅವರು ಮಹಾರಾಷ್ಟ್ರಕ್ಕೂ 370ನೇ ವಿಧಿಗೂ ಏನು ಸಂಬಂಧ? ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಅವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370ನೇ ವಿಧಿ ಮರು ಸ್ಥಾಪಿಸುವುದಾಗಿ ಘೋಷಿಸಲಿ ಎಂದು ಶಾ ಸವಾಲು ಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com