ಪಾಕ್ ಸೇನೆಯಿಂದ ಭಾರತೀಯ ಸೈನಿಕರ ಹತ್ಯೆ: ಮತ್ತೆ ಪಿಒಕೆ ಮೇಲೆ ಸೇನೆ ದಾಳಿ!

ಪಾಕಿಸ್ತಾನ ಸೇನೆ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಇದೀಗ ಭಾರತೀಯ ಸೇನೆಯ ಸೈನಿಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಪಾಕಿಸ್ತಾನ ಸೇನೆ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಇದೀಗ ಭಾರತೀಯ ಸೇನೆಯ ಸೈನಿಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ತಂಗ್ ಧಾರ್ ಸೆಕ್ಟರ್ ನಲ್ಲಿ ಇಂದು ಮುಂಜಾನೆ ಪಾಕಿಸ್ತಾನ ಸೇನೆ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹೊಡೆದುರುಳಿಸಿತ್ತು. ಈ ಘಟನೆ ಬೆನ್ನಲ್ಲೇ ಭಾರತೀಯ ಸೇನೆಯ ಒಂದು ತುಕಡಿ ಪಾಕ್ ಅಕ್ರಮಿತ ಕಾಶ್ಮೀರದೊಳಗೆ ನುಗ್ಗಿದ್ದು, ಅಲ್ಲಿರುವ ಉಗ್ರ ಕ್ಯಾಂಪ್ ಗಳ ಮೇಲೆ ತೀವ್ರ ದಾಳಿ ನಡೆಸಿದೆ ಎನ್ನಲಾಗಿದೆ.

ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಭಾರತೀಯ ಸೇನೆಯ ಒಂದು ತುಕಡಿ ತಂಗ್ ಧಾರ್ ಸೆಕ್ಚರ್ ಗೆ ಹೊಂದಿಕೊಂಡಂತೆ ಇರುವ ಪಾಕಿಸ್ತೇನ ಸೇನೆ ದಾಳಿ ಮಾಡಿದ್ದು, ಅಲ್ಲಿರುವ ಉಗ್ರ ಕ್ಯಾಂಪ್ ಗಳ ಮೇಲೆ ತೀವ್ರ ದಾಳಿ ನಡೆಸಿದೆ. ಸೇನೆ ತನ್ನ ಆರ್ಟಿಲರಿ ಗನ್ ಗಳ ಮೂಲಕ ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com