ಕೇಂದ್ರ ಸರ್ಕಾರ ಈಗಲಾದರೂ ಆರ್ಥಿಕ ತಜ್ಞರ ಸಲಹೆ ಪಡೆಯಲಿ: ಸುಬ್ರಮಣಿಯಮ್ ಸ್ವಾಮಿ

ಕನಿಷ್ಠ ಪಕ್ಷ ಈಗಾಲಾದರೂ ಕೇಂದ್ರ ಸರ್ಕಾರ ಆರ್ಥಿಕ ತಜ್ಞರಿಂದ ಸಲಹೆ ಪಡೆಯಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಿಮ್ಲಾ: ಕನಿಷ್ಠ ಪಕ್ಷ ಈಗಾಲಾದರೂ ಕೇಂದ್ರ ಸರ್ಕಾರ ಆರ್ಥಿಕ ತಜ್ಞರಿಂದ ಸಲಹೆ ಪಡೆಯಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಕೇಂದ್ರದ ಹಿಂದಿನ ಮತ್ತು ಈಗಿನ ಮೋದಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿ ಮತ್ತು ಸುಧಾರಣಾ ಕ್ರಮಗಳನ್ನು ಟೀಸಿಕಿರುವ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳ ಪರಿಣಾಮ ದೇಶದ ಆರ್ಥಿಕತೆ ಅಧೋಗತಿಗಿಳಿದಿದೆ ಎಂದು ಕಿಡಿಕಾರಿದ್ದಾರೆ.

ಶನಿವಾರ ಶಿಮ್ಲಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅವೈಜ್ಞಾನಿಕ ಆರ್ಥಿಕ ನೀತಿಗಳ ಪರಿಣಾಮ ದೇಶದ ಆರ್ಥಿಕತೆ ಅಧೋಗತಿಗಿಳಿದಿದ್ದು ಇದೀಗ ಚೇತರಿಕೆ ಕೈಗೊಂಡಿರುವ ಕ್ರಮಗಳನ್ನು ಸಮರ್ಪಕವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕೈಗಾರಿಕಾ ವಲಯಕ್ಕೆ ಹೆಚ್ಚು ಹಣ ಹರಿದು ಬರಲು ಈಗ ನಡೆಸುವ ಪ್ರಯತ್ನ ಉದ್ದೇಶವನ್ನು ಈಡೇರಿಸುವುದಿಲ್ಲ ಎಂದಿದ್ದಾರೆ. ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚದ ಹೊರತು ಕೈಗಾರಿಕೆಗಳ ಚೇತರಿಕೆ ಸಾಧ್ಯವಿಲ್ಲ ಎಂದು ಅವರು ವಿವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com