ಕಾಂಗ್ರೆಸ್ ಈಗಾಗಲೇ ಸೋತಿದೆ: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈಗಾಗಲೇ ಸೋತು ಯುದ್ಧಭೂಮಿಯನ್ನು ಬಿಟ್ಟುಹೋಗಿವೆ. ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಅವರ ಮಾತಿಗೆ ಬೆಲೆಯಿಲ್ಲ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. 
ಮನೋಹರ್ ಲಾಲ್ ಖಟ್ಟರ್
ಮನೋಹರ್ ಲಾಲ್ ಖಟ್ಟರ್

ಕರ್ನಲ್ (ಹರ್ಯಾಣ): ರಾಜ್ಯಾದ್ಯಂತ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈಗಾಗಲೇ ಸೋತು ಯುದ್ಧಭೂಮಿಯನ್ನು ಬಿಟ್ಟುಹೋಗಿವೆ. ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಅವರ ಮಾತಿಗೆ ಬೆಲೆಯಿಲ್ಲ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.


ಇಂದು ಬೆಳಗ್ಗೆ ಮತಗಟ್ಟೆಗೆ ಸೈಕಲ್ ನಲ್ಲಿ ಬಂದು ಮತದಾನ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 
ಹರ್ಯಾಣದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಇನ್ನೊಂದೆಡೆ ಸಿಎಂ ಖಟ್ಟರ್ ನೇತೃತ್ವದ ಬಿಜೆಪಿ 90 ವಿಧಾನಸಭಾ ಕ್ಷೇತ್ರಗಳ ಪೈಕಿ 75 ಸೀಟುಗಳನ್ನು ನಾವು ಗೆಲ್ಲುತ್ತೇವೆ ಎಂದು ಹೇಳಿಕೊಂಡು ಬಂದಿದೆ. ಇಲ್ಲಿ ವಿವಿಧ ಪಕ್ಷಗಳ 1,169 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.


ಪ್ರಸ್ತುತ ಹರ್ಯಾಣದಲ್ಲಿ ಬಿಜೆಪಿಯ 48 ಮಂದಿ ಶಾಸಕರಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ 10 ಸೀಟುಗಳನ್ನು ಗೆದ್ದಿದೆ. ಇಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ, ರಂದೀಪ್ ಸಿಂಗ್ ಸುರ್ಜೆವಾಲ, ಕಿರಣ್ ಚೌಧರಿ, ಕುಲ್ ದೀಪ್ ಬಿಶ್ನೊಯ್ ಮತ್ತು ಜೆಜೆಪಿಯ ದುಶ್ಯಂತ್ ಚೌಟಾಲಾ ಇದ್ದಾರೆ.


ಬಿಜೆಪಿಯಿಂದ ಈ ಬಾರಿ ಮೂವರು ಕ್ರೀಡಾಳುಗಳಾದ ಬಬಿತಾ ಪೊಗಟ್,ಯೋಗೇಶ್ವರ್ ದತ್ ಮತ್ತು ಸಂದೀಪ್ ಸಿಂಗ್ ಮತ್ತು ಟಿಕ್ ಟಾಕ್ ಸ್ಟಾರ್ ಸೊನಾಲಿ ಪೊಗಟ್ ಇದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com