ನವೆಂಬರ್ 18ರಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭ

ಇದೇ ನವೆಂಬರ್ 18ರಿಂದ ಸಂಸತ್ ಉಭಯ ಸದನಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗ ಸಚಿವಾಲಯ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಇದೇ ನವೆಂಬರ್ 18ರಿಂದ ಸಂಸತ್ ಉಭಯ ಸದನಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತಂತೆ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ನವೆಂಬರ್ 18ರಿಂದ ಡಿಸೆಂಬರ್ 13ರವರೆಗೆ ಸಂಸತ್ ನ  ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಡೆಯಲಿವೆ ಎನ್ನಲಾಗಿದೆ.

ಈ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ಸಂಸತ್ ನ ಉಭಯ ಸದನಗಳ ಸಚಿವಾಲಯಗಳೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಕಲೆಹಾಕುತ್ತಿದೆ. ಅಲ್ಲದೆ ನಿಗದಿತ ಸಮಯದಲ್ಲೇ ಕಲಾಪ ನಡೆಸಲು ಸಿದ್ಧತೆ ಆರಂಭಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆರ್ಥಿಕ ಹಿಂಜರಿತ, ಕೈಗಾರಿಕಾ ಅಭಿವೃದ್ಧಿ ಕುಂಠಿತ, ಉತ್ಪಾದನೆ ಕುಂಠಿತ ಸೇರಿದಂತೆ ಹಲವು ವಿಚಾರಗಳ ಕುರಿತು ಕೇಂದ್ರದ ಬಿಜೆಪಿ ಸರ್ಕಾರವನ್ನು ಪ್ರಶ್ನೆ ಮಾಡಲು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತುದಿಗಾಲಲ್ಲಿ ನಿಂತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com