ಜಮ್ಮು-ಕಾಶ್ಮೀರ: ಪೊಂಚ್ ಬಳಿ ಪಾಕ್ ಶೆಲ್ಲಿಂಗ್ ದಾಳಿ, ಇಬ್ಬರು ನಾಗರಿಕರಿಗೆ ಗಾಯ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಇಂದು  ಭಾರೀ ಶೆಲ್ಲಿಂಗ್ ದಾಳಿ ನಡೆಸಲಾಗಿದ್ದು, ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ

 ಜಮ್ಮು: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಇಂದು  ಭಾರೀ ಶೆಲ್ಲಿಂಗ್ ದಾಳಿ ನಡೆಸಲಾಗಿದ್ದು, ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮೆಂದಾರ್ ಸೆಕ್ಟರ್ ನ ಬಾಲಕೋಟ್ ಪ್ರದೇಶದಾದ್ಯಂತ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ  ಮೊರ್ಟಾರ್ ಶೆಲ್ಲಿಂಗ್ ದಾಳಿ ನಡೆಸಲಾಗಿದೆ. ಭಾರತೀಯ ಸೇನೆಯಿಂದ ಪ್ರತ್ಯುತ್ತರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಾಕ್ ಶೆಲ್ಲಿಂಗ್ ದಾಳಿಯಿಂದಾಗಿ ಗಾಯಗೊಂಡಿದ್ದ ಇಬ್ಬರು ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೆಲ್ಲಿಂಗ್ ದಾಳಿಯಾಗುತ್ತಿರುವ ಗ್ರಾಮಸ್ಥರು ಮನೆ ಹಾಗೂ ಬಂಕರ್ಸ್ ಕೆಳಗಡೆ ರಕ್ಷಣೆ ಪಡೆಯುತ್ತಿದ್ದಾರೆ. ಕೆಲ ಶಾಲೆಗಳ ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com