ಗಡಿ ನುಸುಳಲು ಬಂದಿದ್ದ ನೂರಾರು ಉಗ್ರರ ಕಾಲ್ಕೀಳುವಂತೆ ಮಾಡಿದ ಭಾರತೀಯ ಸೇನೆ!

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಭಾರತದೊಳಗೆ ನುಸುಳಲು ಸಿದ್ಧವಾಗಿ ನಿಂತಿದ್ದ ಪಾಕಿಸ್ತಾನ ನೂರು ಉಗ್ರರಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, ಸೇನೆ ದಾಳಿ ಹೆದರಿದ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಭಾರತದೊಳಗೆ ನುಸುಳಲು ಸಿದ್ಧವಾಗಿ ನಿಂತಿದ್ದ ಪಾಕಿಸ್ತಾನ ನೂರು ಉಗ್ರರಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, ಸೇನೆ ದಾಳಿ ಹೆದರಿದ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ 6 ಉಗ್ರರ ಶಿಬಿರಗಳಿದ್ದು, ಶಿಬಿರಗಳಲ್ಲಿ ಅಡಗಿ ಕುಳಿತಿದ್ದ ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಯತ್ನಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯಿಂದ ಸುಮಾರು 8 ಕಿ.ಮೀ ದೂರದಲ್ಲಿ ಶಿಬಿರಗಳಲ್ಲಿ ಉಗ್ರರು ಅಡಗಿ ಕುಳಿತು ಗಡಿ ನುಸುಳಲು ಯತ್ನಿಸಿದ್ದಾರೆ. ಈ ವೇಳೆ ಸೇನೆ ದಿಟ್ಟ ಉತ್ತರ ನೀಡಿದ್ದು, ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹಾಗೂ ನಾಗರೀರೊಬ್ಬರು ಮೃತಪಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಚಳಿಗಾಲ ಆರಂಭವಾಗಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಉಗ್ರರನ್ನು ನುಸುಳಿಸುವ ಪಾಕಿಸ್ತಾನದ ಯತ್ನ ಮುಂದುವರೆಯಲಿದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಉತ್ತರ ಕಾಶ್ಮೀರದ ತಂಗ್ಧಾರ್ ಸೆಕ್ಟರ್'ನ ಕುಲ್ವಾಜ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ಗುಂಡಿನ ದಾಳಿ ನಡೆಸುತ್ತಿದೆ. ಶನಿವಾರ ರಾತ್ರಿ ಕೂಡ ಕದನ ವಿರಾಮ ಉಲ್ಲಂಘನೆ ಮಾಡಿದೆ. ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನೇ ನೀಡಿದ್ದು, 6 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಉಗ್ರರ ನೆಲೆಗಳನ್ನು ನಾಶಪಡಿಸಲು ಭಾರತೀಯ ಸೇನೆ ಫಿರಂಗಿಗಳನ್ನು ಬಳಕೆ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಭಾನುವಾರ ಹೇಳಿಕೆ ನೀಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಗಡಿ ನಿಯಂತ್ರಣ ರೇಳೆ ಬಳಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, 4 ಉಗ್ರರ ಶಿಬಿರಗಳನ್ನು ನಾಶಪಡಿಸಲಾಗಿದೆ. ದಾಳಿ ವೇಳೆ 6-10 ಪಾಕಿಸ್ತಾನ ಯೋಧರು ಸಾವನ್ನಪ್ಪಿದ್ದಾರೆಂದು ಹೇಳಿದ್ದರು. 

ಗಡಿಯಲ್ಲಿ ಪಾಕಿಸ್ತಾನ ಸೇನೆ ಹಾಗೂ ಉಗ್ರರ ಚಟುವಟಿಕೆಗಳನ್ನು ಗಮನಿಸುತ್ತಿದ್ದೇವೆ. ಗಡಿ ನಿಯಂತ್ರಣ ರೇಖೆ ಬಳಿ 6 ಉಗ್ರರ ನೆಲೆಗಳಿದ್ದು, 15-20 ಉಗ್ರರು ಗಡಿ ನುಸುಳಲು ಸಿದ್ಧವಾಗಿ ನಿಂತಿದ್ದಾರೆ. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತಂಗ್ಧಾನ್ ಸೆಕ್ಟರ ಬಲಿ ಉಗ್ರರು ಗಡಿ ನುಸುಳಲು ಯತ್ನಿಸಿದ್ದರು. ಗಡಿ ನುಸುಳಲು ಯತ್ನಿಸಿದ್ದ 100ರನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com