ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಿ: ಪ್ರಧಾನಿ ಮೋದಿಗೆ ನಿತೀಶ್ ಕುಮಾರ್ ಆಗ್ರಹ

ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎನ್ಡಿಎ ಮೈತ್ರಿ ಪಕ್ಷ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ. 
ನಿತೀಶ್ ಕುಮಾರ್-ಅರವಿಂದ್ ಕೇಜ್ರಿವಾಲ್
ನಿತೀಶ್ ಕುಮಾರ್-ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎನ್ಡಿಎ ಮೈತ್ರಿ ಪಕ್ಷ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ. 

ಮುಂದಿನ ವರ್ಷ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದಕ್ಕೂ ಮುನ್ನು ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಿ ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಆಗ್ರಹಿಸಿದರು. 

ಪೂರ್ಣ ರಾಜ್ಯದ ಸ್ಥಾನಮಾನ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದಿನಿಂದ ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತಾ ಬಂದಿದ್ದರು. ಆದರೆ ಈ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಆದರೆ ಇದಗೀ ಎನ್ಡಿಎ ಮಿತ್ರ ಪಕ್ಷ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಆಗ್ರಹಿಸಿರುವುದು ಅರವಿಂದ್ ಕೇಜ್ರಿವಾಲ್ ಗೆ ಬಲ ಬಂದಂತಾಗಿದೆ. 

ಕಳೆದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದವು. ಮೋದಿ ಸಂಪುಟದಲ್ಲಿ ಜೆಡಿಯುಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲದ ಕಾರಣ ನಿತಿಶ್ ಕುಮಾರ್ ಪ್ರಧಾನಿ ಮೋದಿ ವಿರುದ್ಧ ಮುನಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com