ಕಮಲೇಶ್ ತಿವಾರಿ ಕುಟುಂಬಕ್ಕೆ ಮನೆ, 15 ಲಕ್ಷ ರೂ. ಪರಿಹಾರ ಘೋಷಿಸಿದ ಉತ್ತರ ಪ್ರದೇಶ ಸಿಎಂ

ದುಷ್ಕರ್ಮಿಗಳಿಂದ ತನ್ನ ಕಚೇರಿಯಲ್ಲೇ ಹತ್ಯೆಗೀಡಾದ ಹಿಂದೂ ಸಮಾಜ ಪಕ್ಷದ ಮುಖ್ಯಸ್ಥ ಕಮಲೇಶ್ ತಿವಾರಿ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನೀಡುವುದಾಗಿ ಬುಧವಾರ ಘೋಷಿಸಿದೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ದುಷ್ಕರ್ಮಿಗಳಿಂದ ತನ್ನ ಕಚೇರಿಯಲ್ಲೇ ಹತ್ಯೆಗೀಡಾದ ಹಿಂದೂ ಸಮಾಜ ಪಕ್ಷದ ಮುಖ್ಯಸ್ಥ ಕಮಲೇಶ್ ತಿವಾರಿ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನೀಡುವುದಾಗಿ ಬುಧವಾರ ಘೋಷಿಸಿದೆ.

ಸೀತಾಪುರ್ ಜಿಲ್ಲೆಯ ಮೆಹಮೂದಾಬಾದ್ ತೆಹ್ಸಿಲ್ ನಲ್ಲಿ ಒಂದು ಮನೆ ಹಾಗೂ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಹಿಂದುತ್ವವಾದಿ ಕಮಲೇಶ್ ತಿವಾರಿ ಹತ್ಯೆ ಪ್ರಕರಣವನ್ನು ಫಾಸ್ಟ್ ಟ್ರಾಕ್ ಕೋರ್ಟ್ ಗಳಲ್ಲಿ ವಿಚಾರಣೆ ನಡೆಸಲಾಗುವುದು ಮತ್ತು ಹಂತಕರಿಗೆ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಅಕ್ಟೋಬರ್ 18ರಂದು ಉತ್ತರ ಪ್ರದೇಶದ ಲಖನೌದಲ್ಲಿ ಕಮಲೇಶ್ ತಿವಾರಿ ಅವರನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ನಿನ್ನೆ ಗುಜರಾತ್ ನಲ್ಲಿ ಬಂಧಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com