ಸ್ಥಳೀಯ ಸಂಸ್ಥೆ ಚುನಾವಣೆ: ಕಾಶ್ಮೀರದಲ್ಲಿ ದಾಖಲೆಯ ಶೇ. 98.3 ರಷ್ಟು ಮತದಾನ!

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಶೇ.98.3ರಷ್ಟು ಮತದಾನವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಶೇ.98.3ರಷ್ಟು ಮತದಾನವಾಗಿದೆ.

ಕೇಂದ್ರ ಸರ್ಕಾರ 370ನೇ ವಿಧಿ ರದ್ದುಗೊಳಿಸಿದ್ದನ್ನು ಖಂಡಿಸಿ ಕಾಂಗ್ರೆಸ್, ಎನ್ ಸಿ ಮತ್ತು ಪಿಡಿಪಿ ಚುನಾವಣೆ ಬಹಿಷ್ಕರಿಸಿದ್ದರೂ ಶೇ.98.3ರಷ್ಟು ಮತದಾನವಾಗಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ.98.3ರಷ್ಟು ಮತದಾನವಾಗಿದೆ ಎಂದು ಕಾಶ್ಮೀರ ಮುಖ್ಯ ಚುನಾವಣಾ ಅಧಿಕಾರಿ ಶೈಲೇಂದರ್ ಕುಮಾರ್ ಅವರು ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದು 9 ಗಂಟೆಗೆ ಮತದಾನ ಆರಂಭವಾಗಿತ್ತು. ವ್ಯಾಪಕ ಭದ್ರತೆಯ ನಡುವೆ ಮತದಾನ ಶಾಂತಿಯುತವಾಗಿ ಅಂತ್ಯಗೊಂಡಿದೆ ಎಂದು ಶೈಲೇಂದರ್ ಕುಮಾರ್ ಹೇಳಿದ್ದಾರೆ.

22 ಜಿಲ್ಲೆಗಳಲ್ಲಿನ ಬ್ಲಾಕ್ ಅಭಿವೃದ್ಧಿ ಮಂಡಳಿಯ ಚುನಾವಣೆಯಲ್ಲಿ 1,065 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com