ನವೆಂಬರ್ 5ರಿಂದ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ದೇಶದ ಆರ್ಥಿಕ ಕುಸಿತ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬ್ಯಾಂಕಿಂಗ್ ವ್ಯವಸ್ಥೆ ಕುಸಿತ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟಿಸಲು ಪ್ರಮುಖ ಪ್ರತಿ ಪಕ್ಷ ಕಾಂಗ್ರೆಸ್ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದ ಆರ್ಥಿಕ ಕುಸಿತ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬ್ಯಾಂಕಿಂಗ್ ವ್ಯವಸ್ಥೆ ಕುಸಿತ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟಿಸಲು ಪ್ರಮುಖ ಪ್ರತಿ ಪಕ್ಷ ಕಾಂಗ್ರೆಸ್ ನಿರ್ಧರಿಸಿದೆ.

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಜನ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ನವೆಂಬರ್ 5ರಿಂದ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.

ನವೆಂಬರ್ 5 ರಿಂದ ನವೆಂಬರ್ 15ರ ವರೆಗೆ 10 ದಿನಗಳ ಕಾಲ ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಮಟ್ಟದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 12 ಮತ್ತು 13ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಆರ್ಥಿಕ ಕುಸಿತದ ವಿಷಯವನ್ನೇ ಕಾರ್ಯಸೂಚಿಯನ್ನಾಗಿ ಮಾಡಲು ಇತರ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ಕಾಂಗ್ರೆಸ್ ತಿಳಿಸಿದೆ. 

ಈ ಅವಧಿಯಲ್ಲಿ, ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದು, ಇದರಲ್ಲಿ ಇತರ ವಿರೋಧ ಪಕ್ಷಗಳನ್ನು ಒಟ್ಟಿಗೆ ತೆಗೆದುಕೊಳ್ಳುವ ಪ್ರಯತ್ನಗಳು ನಡೆಯಲಿವೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com