ಜಮ್ಮು-ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ: ಕೇಂದ್ರಕ್ಕೆ ಸುಪ್ರೀಂಕೋರ್ಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ. ನಿರ್ಬಂಧ ಮುಂದುವರೆಸಲು ಇನ್ನೆಷ್ಟು ದಿನ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ. 
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ. ನಿರ್ಬಂಧ ಮುಂದುವರೆಸಲು ಇನ್ನೆಷ್ಟು ದಿನ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ಆಗಸ್ಟ್ ತಿಂಗಳಿನಲ್ಲಿ ರದ್ದು ಮಾಡಲಾಗಿತ್ತು. 370 ವಿಧಿ ರದ್ದುಗೊಂಡಾಗಿನಿಂದಲೂ ಜಮ್ಮು ಕಾಶ್ಮೀರದಲ್ಲಿ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧ ಇನ್ನೆಷ್ಟು ದಿನ ಇರಲಿದೆ? ನಿರ್ಬಂಧ ಹೇರಿ ಈಗಾಗಲೇ 2 ತಿಂಗಳುಗಳಾಗಿವೆ. ಈ ಬಗ್ಗೆ ಸ್ಪಷ್ಟತೆಗೆ ಬರಬೇಕಿದೆ. ನಿರ್ಬಂಧ ಬಿಟ್ಟು ಬೇರೆ ವಿಧಾನವನ್ನು ಕಂಡುಕೊಳ್ಳಬೇಕಿದೆ ನ್ಯಾಯಮೂರ್ತಿ ಎನ್.ವಿ.ರಮಣ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ತಿಳಿಸಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ನೀವು ನಿರ್ಬಂಧ ಹೇರಬಹುದು. ಆದರೆ, ನಿಮ್ಮ ನಿರ್ಧಾರದ ಬಗ್ಗೆ ನೀವು ಮರುಪರಿಶೀಲಿಸಬೇಕು. ಆಗುತ್ತದೆಯೇ? ಎಂದು ಪ್ರಶ್ನಿಸಿತು. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಶೇ.90ರಷ್ಟು ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪರಿಸ್ಥಿತಿಯನ್ನು ಪ್ರತಿನಿತಾಯ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ. 

ಬಳಿಕ ಮಾತನಾಡಿರುವ ನ್ಯಾಯಪೀಠ, ಅಂತರ್ಜಾನ ನಿರ್ಬಂಧಗಳ ಬಗ್ಗೆ ಜನರು ಸಂವಹನ ವಿಧಾನವನ್ನು ಹೊಂದಿರಬೇಕೆಂದು ಹೇಳಿದ್ದು, ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com