ಹರಿಯಾಣ: ಮನೋಹರ್ ಲಾಲ್ ಖಟ್ಟರ್ ರಿಂದ ಇಂದೇ ಸರ್ಕಾರ ರಚನೆ ಹಕ್ಕು ಮಂಡನೆ ಸಾಧ್ಯತೆ 

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧತೆ ನಡೆಸಿದ್ದು, ಶುಕ್ರವಾರ ರಾಜ್ಯಪಾಲ ಸತ್ಯದೇವ್ ನಾರಾಯಣ್ ಅವರನ್ನು...
ಮನೋಹರ್ ಲಾಲ್ ಖಟ್ಟರ್
ಮನೋಹರ್ ಲಾಲ್ ಖಟ್ಟರ್

ಚಂಡೀಗಢ: ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧತೆ ನಡೆಸಿದ್ದು, ಶುಕ್ರವಾರ ರಾಜ್ಯಪಾಲ ಸತ್ಯದೇವ್ ನಾರಾಯಣ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಾಧ್ಯತೆ ಇದೆ.

ಖಟ್ಟರ್ ಅವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದು, ಲೋಕಹಿತ ಪಕ್ಷದ ಮುಖ್ಯಸ್ಥ ಗೋಪಾಲ್ ಖಂಡ ಹಾಗೂ ಪಕ್ಷೇತರ ಶಾಸಕ, ಜಾಟ್ ನಾಯಕ ಚೌಧರಿ ದೇವಿ ಲಾಲ್ ಅವರ ಪುತ್ರ ರಂಜಿತ್ ಸಿಂಗ್ ಅವರು ಈಗಾಗಲೇ ಬಿಜೆಪಿಗೆ ಬೇಷರತ್ ಬೆಂಬಲ ನೀಡಿದ್ದು, ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಭಿ ನಡೆಸುತ್ತಿದ್ದಾರೆ.

ಖಟ್ಟರ್ ಅವರು ಸಹ ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದು, ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷೇತರ ಶಾಸಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬಿಜೆಪಿ  40 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರ ಹಿಡಿಯುವುದಕ್ಕೆ ಅಗತ್ಯವಿದ್ದ 45 ಶಾಸಕರ ಸಂಖ್ಯಾಬಲಕ್ಕೆ ಕೊರತೆ ಎದುರಾಗಿ ಯಾರೇ ಸರ್ಕಾರ ರಚನೆ ಮಾಡಬೇಕಾದರೂ ಪಕ್ಷೇತರರು ಅಥವಾ ಹರ್ಯಾಣದ ಪ್ರಾದೇಶಿಕ ಪಕ್ಷ ಜೆಜೆಪಿಯ ಸಹಕಾರ ಅಗತ್ಯವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com