ಪ್ರಧಾನಿ ಭೇಟಿ ಮಾಡಿದ ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್

ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ನವದೆಹಲಿಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಿ ಭೇಟಿ ಮಾಡಿದ ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್
ಪ್ರಧಾನಿ ಭೇಟಿ ಮಾಡಿದ ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್

ನವದೆಹಲಿ: ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ನವದೆಹಲಿಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್  ಭೇಟಿ ಮಾಡಿದರು ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ನಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಅವರ ಭೇಟಿಗೆ ಮುನ್ನ, ಡೇವಿಡ್ ಮಾಲ್ಪಾಸ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಾರ್ತ್ ಬ್ಲಾಕ್ ನಲ್ಲಿ ಸಭೆ ನಡೆಸಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನವ ದೆಹಲಿಯ ನಾರ್ತ್ ಬ್ಲಾಕ್ ನಲ್ಲಿರುವ ತಮ್ಮ ಕಚೇರಿಯಲ್ಲಿ ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ನೇತೃತ್ವದ ನಿಯೋಗದೊಂದಿಗೆ  ಸಭೆ ನಡೆಸಿದರು  ಎಂದು  ನಿರ್ಮಲಾ ಸೀತಾರಾಮನ್  ಕಾರ್ಯಾಲಯ ನಂತರ ಟ್ವೀಟ್ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com