ಬಾಲಕ ಸುಜಿತ್ ಸಾವು ನೋವು ತಂದಿದೆ: ರಜನಿಕಾಂತ್

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ನಡಕಟ್ಟುಪಟ್ಟಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ೨ ವರ್ಷದ ಬಾಲಕ ಸುಜಿತ್ ವಿಲ್ಸನ್ ಸಾವಿನ ಕುರಿತು ಖ್ಯಾತ ನಟ ರಜನಿಕಾಂತ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Published: 29th October 2019 03:54 PM  |   Last Updated: 29th October 2019 03:54 PM   |  A+A-


Rajanikanth

ರಜನೀಕಾಂತ್

Posted By : Lingaraj Badiger
Source : UNI

ಚೆನ್ನೈ/ಬೆಂಗಳೂರು: ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ನಡಕಟ್ಟುಪಟ್ಟಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ೨ ವರ್ಷದ ಬಾಲಕ ಸುಜಿತ್ ವಿಲ್ಸನ್ ಸಾವಿನ ಕುರಿತು ಖ್ಯಾತ ನಟ ರಜನಿಕಾಂತ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

"ಪುಟ್ಟ ಬಾಲಕ ಸುಜಿತ್ ವಿಲ್ಸನ್ ಜೀವಂತ ಹೊರಬರದ ಸುದ್ದಿ ನಿಜಕ್ಕೂ ನೋವು ತಂದಿದೆ. ಆತನ ಆತ್ಮಕ್ಕೆ ಶಾಂತಿ ಸಿಗಲಿ, ತಂದೆ ತಾಯಿಗಳಿಗೆ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ" ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

ಸತತ ೮೨ ಗಂಟೆಗಳ ರಕ್ಷಣಾ ಕಾರ್ಯ ವಿಫಲವಾಗಿದ್ದು, ಆತನ ಶವವನ್ನು ಮಂಗಳವಾರ ಹೊರತೆಗೆಯಲಾಗಿದೆ.

ಮಗು ಬದುಕಿ ಬರಲೆಂದು ಪ್ರಾರ್ಥಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಬಾಲಕನ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದರು.  ಆದರೆ ಎಲ್ಲ ಪರಿಶ್ರಮ  ವ್ಯರ್ಥವಾಗಿದ್ದು, ಸುಜಿತ್ ದೇಹ ಕೊಳವೆ ಬಾವಿಯ ೭೦ ಅಡಿ ಆಳದಲ್ಲಿ ಕೊಳೆತ ಸ್ಥಿತಿಯಲ್ಲಿ ದೊರಕಿದ್ದು, ಪೋಷಕರಿಗೆ ಹಸ್ತಾಂತರಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
HD Kumaraswamy

ಹಿಂದಿ ಗೊತ್ತಿರುವುದರಿಂದ ರಾಷ್ಟ್ರ ರಾಜಕಾರಣದಲ್ಲಿ ಉತ್ತರ ಭಾರತದ ನಾಯಕರಿಗೆ ದಕ್ಷಿಣದವರಿಗಿಂತ ಹೆಚ್ಚಿನ ಪ್ರಯೋಜನ ಆಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp