ಚಿದಂಬರಂಗೆ ಅನಾರೋಗ್ಯ: ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಚಿವ

ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಚಿದಂಬರಂ
ಚಿದಂಬರಂ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರು ಹೆಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ ಹರಿ ಶಂಕರ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ.

ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಕ್ರೋನ್ಸ್ ಕಾಯಿಲೆಯಿಂದ ಬಳಲುತ್ತಿರುವುದರಿಂದ ಅವರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯ ಇದೆ ಮೂಲಗಳು ತಿಳಿಸಿವೆ.

ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಚಿದಂಬರಂ ಅವರನ್ನು ಇಂದು ವಿಶೇಷ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.

ಕಳೆದ ಆಗಸ್ಟ್ ತಿಂಗಳಲ್ಲಿ ಸಿಬಿಐ ಅಧಿಕಾರಿಗಳು ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ಬಂಧಿಸಿದ್ದರು. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ನಂತರ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಅವರನ್ನು ವಶಕ್ಕೆ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com