ಕರ್ತಾರ್‌ಪುರ; ಯಾತ್ರಿಗಳ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಡಾ. ಸಿಂಗ್, ಪಂಜಾಬ್ ಸಿಎಂ ಅಮರೀಂದರ್

ಭಾರತ ಮತ್ತು ಪಾಕ್ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದ್ದ ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ನವೆಂಬರ್ 9 ರಂದು ಉದ್ಘಾಟನೆಯಾಗಲಿದೆ.

Published: 30th October 2019 01:39 PM  |   Last Updated: 30th October 2019 01:39 PM   |  A+A-


pilgrims to visit Kartarpur Sahib

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ಪಂಜಾಬ್: ಭಾರತ ಮತ್ತು ಪಾಕ್ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದ್ದ ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ನವೆಂಬರ್ 9 ರಂದು ಉದ್ಘಾಟನೆಯಾಗಲಿದೆ.

ಇನ್ನು ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್‌ಗೆ ಉದ್ಘಾಟನಾ ಜಾಥಾಕ್ಕೆ ಹೋಗಲಿರುವ 575 ಯಾತ್ರಿಗಳ ಪಟ್ಟಿಯನ್ನು ಭಾರತ ಮಂಗಳವಾರ ಹಂಚಿಕೊಂಡಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಂಜಾಬ್ ಸಿಎಂ ಕ್ಯಾಪ್ಟನ್ ಅಮೀಂದರ್ ಸಿಂಗ್ ಈ ಪಟ್ಟಿಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗುವ ಹಲವಾರು ಪ್ರಮುಖ ನಾಯಕರ ಹೆಸರುಗಳೂ ಇವೆ.

ಅಲ್ಲದೆ ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಹರ್ಸಿಮ್ರತ್ ಕೌರ್ ಬಾದಲ್ ಮತ್ತು ಇತರ ಪಂಜಾಬ್ ಸಂಸದರು-ಶಾಸಕರು ಭಾಗವಹಿಸಲಿದ್ದಾರೆ. ಕರ್ತಾರ್‌ಪುರ ಕಾರಿಡಾರ್‌ನ ಭಾರತ ಭಾಗವನ್ನು ನವೆಂಬರ್ 9 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ದೀರ್ಘಾವಧಿಯ ಬೇಡಿಕೆಯಾಗಿದ್ದ ಕರ್ತಾರ್‌ಪುರ ಕಾರಿಡಾರ್ ಅನ್ನು ಭಾರತ ಮತ್ತು ಪಾಕಿಸ್ತಾನ ಅಕ್ಟೋಬರ್ 24 ರಂದು ಎರಡೂ ದೇಶಗಳ ಯಾತ್ರಾರ್ಥಿಗಳಿಗಾಗಿ ಕಾರ್ಯಗತಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿದ್ದವು. ಗೃಹ ಸಚಿವಾಲಯವು ಸಹಿ ಮಾಡಿದ ಒಪ್ಪಂದದ ಪ್ರಕಾರ, ಎಲ್ಲಾ ನಂಬಿಕೆಯ ಭಾರತೀಯ ವ್ಯಕ್ತಿಗಳು ಈ ಸ್ಥಳಕ್ಕೆ ಭೇಟಿ ನೀಡಬಹುದು ಮತ್ತು ಪ್ರಯಾಣವು ವೀಸಾ ಮುಕ್ತವಾಗಿರುತ್ತದೆ. ಆದಾಗ್ಯೂ, ಒಪ್ಪಂದವು 5 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ ಮತ್ತು ಅದನ್ನು ಪರಸ್ಪರ ಒಪ್ಪಿಗೆಯಿಂದ ವಿಸ್ತರಿಸಬಹುದು.

ಕರ್ತಾರ್‌ಪುರ ಕಾರಿಡಾರ್ ಒಪ್ಪಂದವನ್ನು ಉಭಯ ದೇಶಗಳು ಒಂದು ತಿಂಗಳ ನೋಟಿಸ್ ನೀಡುವ ಮೂಲಕ ಕೊನೆಗೊಳಿಸಬಹುದು. ಒಪ್ಪಂದದ ನಿರಂತರ ಉಲ್ಲಂಘನೆ ಸಂಭವಿಸಿದಲ್ಲಿ ಕಾರಿಡಾರ್‌ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬಹುದು. ಯಾವುದೇ ರೀತಿಯ ಸಮಸ್ಯೆಗಳನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕ ಪರಿಹರಿಸಲಾಗುತ್ತದೆ. ಕರ್ತಾರ್ಪುರ್ ಸಾಹಿಬ್ ಗುರುದ್ವಾರವನ್ನು 1522 ರಲ್ಲಿ ಸಿಖ್ ಸಂಸ್ಥಾಪಕ ಗುರುನಾನಕ್ ದೇವ್ ಸ್ಥಾಪಿಸಿದರು. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp