ಧ್ಯಾನಕ್ಕಾಗಿ ರಾಹುಲ್ ಗಾಂಧಿ ವಿದೇಶ ಪ್ರವಾಸ, ಶೀಘ್ರ ವಾಪಸ್: ಕಾಂಗ್ರೆಸ್ 

ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಧ್ಯಾನಕ್ಕಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಧ್ಯಾನಕ್ಕಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ.

ನವೆಂಬರ್ 5ರಿಂದ 15ರ ವರೆಗೆ ದೇಶಾದ್ಯಂತ ನಡೆಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ರಾಹುಲ್ ಗಾಂಧಿ ಗೈರು ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲ ಅವರು, ರಾಹುಲ್ ಗಾಂಧಿ ಅವರು ತಮ್ಮ ನಿಯಮಿತ ಧ್ಯಾನಕ್ಕಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ ಎಂದರು.

ರಾಹುಲ್ ಗಾಂಧಿ ಅವರು ಈ ಹಿಂದೆಯೂ ಧ್ಯಾನ ಕೋರ್ಸ್ ಗಾಗಿ ಆಗಾಗ ವಿದೇಶಕ್ಕೆ ತೆರಳಿದ್ದಾರೆ. ಈಗ ಮತ್ತೆ ಅದಕ್ಕಾಗಿಯೇ ವಿದೇಶಕ್ಕೆ ತೆರಳುತ್ತಿದ್ದು, ಶೀಘ್ರದಲ್ಲೇ ವಾಪಸ್ ಆಗಲಿದ್ದಾರೆ ಎಂದು ಸುರ್ಜೆವಾಲ ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಭಾಗವಹಿಸಿದ್ದ ಸಭೆಯಲ್ಲಿಯೇ 10 ದಿನಗಳ ಬೃಹತ್ ಪ್ರತಿಭಟನೆಯನ್ನು ಅಂತಿಮಗೊಳಿಸಲಾಗಿದೆ. ಆದರೆ ರಾಹುಲ್ ಗಾಂಧಿ ಅಥವಾ ಸೋನಿಯಾ ಗಾಂಧಿ ಅವರು ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕತೆಯ ಕಳಪೆ ಸ್ಥಿತಿಯ ಕುರಿತು ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಇದರ ಭಾಗವಾಗಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನವೆಂಬರ್ 5ರಿಂದ 15ರ ವರೆಗೆ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com