ಸರ್ದಾರ್ ಪಟೇಲ್ ಗೆ ಗೌರವ ನಮನ ಸಲ್ಲಿಸದ ಸೋನಿಯಾ, ರಾಹುಲ್ ವಿರುದ್ಧ ರೂಪಾನಿ ವಾಗ್ದಾಳಿ

ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ  ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.
ವಿಜಯ್ ರೂಪಾನಿ
ವಿಜಯ್ ರೂಪಾನಿ

ಗಾಂಧಿನಗರ:  ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ  ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.

ಇಡೀ ದೇಶಾದ್ಯಂತ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ ಜನ್ಮ ದಿನಾಚರಣೆಯಲ್ಲಿ ಮುಳುಗಿರುವಾಗ ಸೋನಿಯಾ ಹಾಗೂ ರಾಹುಲ್ ಗಾಂಧಿ, ದೇಶದ ಉಕ್ಕಿನ ಮನುಷ್ಯನಿಗೆ ಕನಿಷ್ಠ ಗೌರವ ನೀಡದಿರುವುದು ದು:ಖಕರವಾಗಿದೆ ಎಂದು ರೂಪಾನಿ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಫೇಸ್ ಬುಕ್ ಪೇಜ್ ಮೂಲಕ ರಾಹುಲ್ ಗಾಂಧಿ, ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರಿಗೆ ನಮನ ಸಲ್ಲಿಸಿದ್ದರು.

ಭಾರತವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೇಶದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರನ್ನು ದೇಶಾದ್ಯಂತ ಸ್ಮರಿಸಲಾಯಿತು. ಅವರ ಜನ್ಮ ದಿನವನ್ನು 2014 ಅಕ್ಟೋಬರ್ 31ರಿಂದ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com