ನಿರ್ಭಯಾ ಅತ್ಯಾಚಾರಿಗಳನ್ನು ಶೀಘ್ರದಲ್ಲೇ ಗಲ್ಲಿಗೇರಿಸಲಾಗುವುದು: ತಿಹಾರ್ ಜೈಲು ಅಧಿಕಾರಿಗಳು

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಶೀಘ್ರದಲ್ಲೇ ಗಲ್ಲಿಗೇರಿಸಲಾಗುವುದು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 
ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳು
ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳು

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಶೀಘ್ರದಲ್ಲೇ ಗಲ್ಲಿಗೇರಿಸಲಾಗುವುದು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 

ಅಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ವಿರುದ್ಧ ಮೇಲ್ಮನವಿ ಮತ್ತು ಪರಾಮರ್ಶೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿತ್ತು. ಆದರೆ ಅವರನ್ನು ಯಾವುದೇ ಅರ್ಜಿ ಸಲ್ಲಿಸಲು ಮುಂದಾಗಿಲ್ಲ. ಹೀಗಾಗಿ ಮರಣದಂಡನೆ ಜಾರಿ ಶೀಘ್ರದಲ್ಲಿ ಆಗಲಿದೆ ಎಂದರು. 

ಪ್ರಕರಣದ ನಾಲ್ಕು ಅಪರಾಧಿಗಳು ಗಲ್ಲು ಶಿಕ್ಷೆ ವಿರುದ್ಧ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಇನ್ನು ಏಳು ದಿನಗಳ ಕಾಲ ಅವಕಾಶವಿದ್ದು ಅಪರಾಧಿಗಳು ರಾಷ್ಟ್ರಪತಿಗಳಿಗೆ ಮನವಿ ಮಾಡದೆ ಹೋದರೆ ಗಲ್ಲು ಶಿಕ್ಷೆ ಶೀಘ್ರ ಜಾರಿಯಾಗಲಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರ ಡಿಸೆಂಬರ್ ನಲ್ಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ನಂತರ ದೇಶದಲ್ಲಿ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com