ಐಎಸ್ಐನಿಂದ ಬಿಜೆಪಿ, ಬಜರಂಗ ದಳ ಹಣ ಪಡೆಯುತ್ತಿದೆ: ದಿಗ್ವಿಜಯ್ ಸಿಂಗ್

ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಾಗಿರುವ ಐಎಸ್ಐನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದಾರೆ.

Published: 01st September 2019 12:54 PM  |   Last Updated: 01st September 2019 02:41 PM   |  A+A-


Digvijay singh

ದಿಗ್ವಿಜಯ್ ಸಿಂಗ್

Posted By : Manjula VN
Source : ANI

ಭಿಂಡ್: ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಾಗಿರುವ ಐಎಸ್ಐನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದಾರೆ. 

ಭಿಂಡ್ ನಲ್ಲಿ ಮಹಾರಾಣ ಪ್ರತಾಪ್ ಅವರ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಮಾತನಾಡಿರುವ ದಿಗ್ವಿಜಯ್ ಸಿಂಗ್ ಅವರು ಬಿಜೆಪಿ ಹಾಗೂ ಹಿಂದೂ ಸಂಘಟನೆಯಾಗಿರುವ ಬಜರಂಗ ದಳಕ್ಕೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಾಗಿರುವ ಐಎಸ್ಐನಿಂದ ಹಣ ವರ್ಗಾವಣೆಯಾಗುತ್ತಿದೆ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. 

ಮುಸ್ಲಿಮರಿಗಿಂತ ಮುಸ್ಲಿಮೇತರರು ಪಾಕಿಸ್ತಾನದ ಐಎಸ್ಐಗೆ ಸಹಾಯ ಮಾಡುತ್ತಿದ್ದಾರೆ. ಬಿಜೆಪಿ ಪಾಕಿಸ್ತಾನದ ಸಂಸ್ಥೆ ಐಎಸ್ಐನಿಂದ ಹಣ ಪಡೆಯುತ್ತಿದೆ. ಇದನ್ನೂ ಎಲ್ಲರೂ ಗಮನಿಸಬೇಕು. ಇದನ್ನೂ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. 

ದಿಗ್ವಿಜಯ್ ಸಿಂಗ್ ಅವರು ನೀಡಿರುವ ಈ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ. 

ವಿಡಿಯೋಗೆ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ದಿಗ್ವಿಜಯ್ ಸಿಂಗ್ ಅವರು, ಆರೋಪವನ್ನು ತಿರಸ್ಕರಿಸಿದ್ದಾರೆ. ಅಲ್ಲದೆ, ಮಾಧ್ಯಮಗಳ ವಿರುದ್ಧ ಕಿಡಿಕಾರಿ, ಮಾಧ್ಯಮಗಳು ಪಕ್ಷಾತೀತವಾಗಿ ವರದಿ ಮಾಡುತ್ತಿದೆ ಎಂದಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp