ಭಾರತೀಯ ಸೇನಾ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ನಾರವಾನೆ ಅಧಿಕಾರ ಸ್ವೀಕಾರ

ಈಸ್ಟರ್ನ್ ಕಮಾಂಡ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರು ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. 
ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರವಾನೆ
ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರವಾನೆ

ನವದೆಹಲಿ: ಈಸ್ಟರ್ನ್ ಕಮಾಂಡ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರು ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಅವರಿಂದ ಖಾಲಿಯಾದ ಸ್ಥಾನವನ್ನು ನಾರವಾನೆ ಅಲಂಕರಿಸಿದ್ದಾರೆ.

ಲೆಫ್ಟಿನೆಂಟ್ ಜನರಲ್ ನಾರವಾನೆ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ಮಿಲಿಟರಿ ಅಕಾಡೆಮಿಯ ಹಳೆಯ ವಿದ್ಯಾರ್ಥಿ ಎಂದು ಭಾರತೀಯ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಹೇಳಿದ್ದಾರೆ.

ಜೂನ್ 1980ರಲ್ಲಿ ಅವರನ್ನು 7ನೇ ಬೆಟಾಲಿಯನ್, ದಿ ಸಿಖ್ ಲೈಟ್ ಇನ್ಫ್ಯಾಂಟ್ರಿ ರೆಜಿಮೆಂಟ್ಗೆ ನಿಯೋಜಿಸಲಾಯಿತು. ಅಧಿಕಾರಿ ಅತ್ಯಂತ ಸವಾಲಿನ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ  ಮನೋಜ್, ಅಪಾರ ಪ್ರಮಾಣದ ಅನುಭವವನ್ನು ಹೊಂದಿದ್ದಾರೆ. ಸುಮಾರು ನಾಲ್ಕು ದಶಕಗಳ ಕಾಲ ಮಿಲಿಟರಿ ವೃತ್ತಿಜೀವನದಲ್ಲಿ, ಈಶಾನ್ಯ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖ ನೇಮಕಾತಿಗಳನ್ನು ನಿರ್ವಹಿಸಿದ ಹೆಗ್ಗಳಿಕೆ ಹೊಂದಿದ್ದಾರೆ.

ಮೂರು ವರ್ಷಗಳ ಕಾಲ ಮ್ಯಾನ್ಮಾರ್;ನ ಭಾರತೀಯ ರಾಯಭಾರ ಕಚೇರಿಯಲ್ಲಿ ಡಿಫೆನ್ಸ್ ಅಟ್ಯಾಚ್ ಆಗಿ ಕಾರ್ಯನಿರ್ವಹಿಸುವ ಅವಕಾಶವನ್ನೂ ಅವರು ಪಡೆದಿದ್ದಾರೆ. ಕಮಾಂಡ್;ನ ಜಿಒಸಿ-ಇನ್-ಸಿ ಆಗಿ ಅವರ ವಿಶಿಷ್ಟ ಸೇವೆಗಳಿಗಾಗಿ 'ಪರಮ್ ವಿಶಿಷ್ಠ ಸೇವಾ ಪದಕ' ನೀಡಿ ಗೌರವಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com