ಚಂದ್ರಯಾನ-2; ಇಸ್ರೋ ಐತಿಹಾಸಿಕ ಸಾಧನೆ, ಆರ್ಬಿಟರ್ ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್!

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಚಂದ್ರಯಾನ 2 ಆರ್ಬಿಟರ್ ನಿಂದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಚಂದ್ರಯಾನ 2 ಆರ್ಬಿಟರ್ ನಿಂದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಈ ಕುರಿತಂತೆ ಇಸ್ರೋ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಮಧ್ಯಾಹ್ನ 1.15ರಲ್ಲಿ ವಿಕ್ರಮ್ ಲ್ಯಾಂಡರ್ ಚಂದ್ರಯಾನ2 ಆರ್ಬಿಟರ್ ನಿಂದ ಬೇರ್ಪಟ್ಟಿದೆ. ಆ ಮೂಲಕ ಚಂದ್ರನ ಮೇಲ್ಮೈ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯಲು ಕ್ಷಣಗಣನೆ ಆರಂಭವಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ವಿಜ್ಞಾನಿಗಳು, ವಿಕ್ರಮ್ ಲ್ಯಾಂಡರ್ ಸೆಪ್ಟೆಂಬರ್ 2 ರಂದು ಚಂದ್ರಯಾನ -2 ರಿಂದ ಬೇರ್ಪಟ್ಟರು, ಸೆಪ್ಟೆಂಬರ್ 7 ರಂದು ಮಧ್ಯಾಹ್ನ 1:55 ಕ್ಕೆ ಚಂದ್ರನ ಮೇಲೆ ಇಳಿಯಲಿದೆ ಎಂದು ಹೇಳಿದ್ದಾರೆ.

ಅಂತೆಯೇ ತಾತ್ಕಾಲಿಕ ಯೋಜನೆಯ ಪ್ರಕಾರ,  ಸೆಪ್ಟೆಂಬರ್ 3ರಂದು ಮಂಗಳವಾರ ಮೂರು ಸೆಕೆಂಡುಗಳ ಕಾಲ ಸಣ್ಣ ಪ್ರಮಾಣದ ಕಾರ್ಯಾಚರಣೆ ನಡೆಸಲಿದ್ದು, ಲ್ಯಾಂಡರ್‌ ನ ವ್ಯವಸ್ಥೆ ಸಹಜವಾಗಿ ನಡೆಯುತ್ತಿದೆಯೇ ಎಂಬುದನ್ನು 24 ಗಂಟೆಗಳ ಕಾಲ ಪರಿಶೀಲಿಸಲಾಗುತ್ತಿದೆ. ಸೆಪ್ಟೆಂಬರ್ 7 ರಂದು ಮಧ್ಯಾಹ್ನ 1:55 ಕ್ಕೆ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ. ಸೆಪ್ಟೆಂಬರ್ 7, 2019 ರಂದು ಚಂದ್ರನ ಮೇಲ್ಮೈಗೆ ಇಳಿಯುವ ಮೊದಲು, ಭೂಮಿಯಿಂದ ಎರಡು ಆಜ್ಞೆಗಳನ್ನು ನೀಡಲಾಗುವುದು, ಇದರಿಂದ ಲ್ಯಾಂಡರ್‌ ನ ವೇಗ ಮತ್ತು ದಿಕ್ಕನ್ನು ಸುಧಾರಿಸಬಹುದು ಮತ್ತು ಅದು ಮೇಲ್ಮೈಯಲ್ಲಿ ಲಘುವಾಗಿ ಇಳಿಯುತ್ತದೆ ಎಂದು ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್ ಹೇಳಿದ್ದಾರೆ.

ಈ ಕಾರ್ಯಾಚರಣೆಯ ಯಶಸ್ಸು ಭಾರತವನ್ನು "ಅಮೆರಿಕ, ಚೀನಾ ಮತ್ತು ರಷ್ಯಾದ ನಂತರ ಚಂದ್ರನ ಮೇಲ್ಮೈಯಲ್ಲಿ ಇಳಿಯುವ ನಾಲ್ಕನೇ ರಾಷ್ಟ್ರವಾಗಿ ಮತ್ತು ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವದಲ್ಲಿ ಇಳಿಯುವ ಮೊದಲ ರಾಷ್ಟ್ರವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com