ಜಮ್ಮು-ಕಾಶ್ಮೀರ: ಗಡಿ ನುಸುಳಿದ್ದ 2 ಪಾಕ್ ಉಗ್ರರ ಬಂಧನ

ಭಾರತೀಯ ಸೇನಾಪಡೆ ಮಂಗಳವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಕಾಶ್ಮೀರದ ಗುಲ್ಮಾರ್ಗ್'ನ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಪಾಕಿಸ್ತಾನದ ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದೆ.  
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತೀಯ ಸೇನಾಪಡೆ ಮಂಗಳವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಕಾಶ್ಮೀರದ ಗುಲ್ಮಾರ್ಗ್'ನ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಪಾಕಿಸ್ತಾನದ ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದೆ. 

ಉಗ್ರರು ಗಡಿ ನುಸುಳುತ್ತಿದ್ದುದ್ದನ್ನು ಕಂಡ ಸೇನಾ ಪಡೆ ಕೂಡಲೇ ಚುರುಕಿನ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸ್ಥಳದಲ್ಲಿ ಭಾರೀ ಗುಂಡಿನ ಕಾಳಗ ನಡೆದಿದ್ದು, ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ. 

ಬಂಧಿತ ಉಗ್ರರನ್ನು ನಜ್ನೀನ್ ಖೊಖರ್ (25) ಹಾಗೂ ಖಲೀಲ್ ಅಹ್ಮದ್ ಕಯಾನಿ (36) ಎಂದು ಗುರ್ತಿಸಲಾಗಿದೆ. ಕಳೆದ ವಾರ ಗುಲ್ಮಾರ್ಗ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳುತ್ತಿದ್ದಾಗ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಇಬ್ಬರೂ ಉಗ್ರರನ್ನು ಬಂಧನಕ್ಕೊಳಪಡಿಸಿರುವ ಸೇನಾಪಡೆ ತನಿಖೆಗೊಳಪಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com