ಸೆಪ್ಟೆಂಬರ್ 13 ರವರೆಗೆ ಡಿ.ಕೆ. ಶಿವಕುಮಾರ್ ಇಡಿ ವಶಕ್ಕೆ: ದೆಹಲಿ ನ್ಯಾಯಾಲಯ ಆದೇಶ

ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರವರೆಗೂ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲು ನ್ಯಾಯಾಲಯ ಇಂದು ಆದೇಶ ಪ್ರಕಟಿಸಿದೆ
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ನವದೆಹಲಿ: ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರವರೆಗೂ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲು ನ್ಯಾಯಾಲಯ ಇಂದು ಆದೇಶ ಪ್ರಕಟಿಸಿದೆ

ನಿನ್ನೆ ಬಂಧನಕ್ಕೊಳಗಾದ ಡಿಕೆ ಶಿವಕುಮಾರ್ ಅವರನ್ನು ಇಂದು ಮಧ್ಯಾಹ್ನ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲಾಯಿತು. ವಾದ ವಿವಾದ ಆಲಿಸಿದ ವಿಶೇಷ  ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್  ಕುಹರ್ ಸೆಪ್ಟೆಂಬರ್ 13ರವರೆಗೂ ಡಿಕೆ ಶಿವಕುಮಾರ್ ಅವರನ್ನು  ಇಡಿ ವಶಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.

ಪ್ರತಿದಿನ ಕುಟುಂಬ ಸದಸ್ಯರು ಹಾಗೂ ವಕೀಲರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ಮತ್ತೊಂದೆದೆ ಡಿಕೆ ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು  ಸೆಪ್ಟೆಂಬರ್ 13ಕ್ಕೆ ನ್ಯಾಯಾಲಯ ಮುಂದೂಡಿದೆ. 

ನ್ಯಾಯಾಲಯದ ತೀರ್ಪಿನಿಂದ ಕಾನೂನು ಸಮರದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಹಿನ್ನೆಡೆಯಾಗಿದ್ದು, ಇನ್ನೂ ಹತ್ತು ದಿನಗಳ ಕಾಲ ಇಡಿ ವಶದಲ್ಲಿ ಇರಬೇಕಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com