ಆರ್ಥಿಕ ಹಿಂಜರಿತ ಮರೆಮಾಚಲು ಮೋದಿ ಸರ್ಕಾರದಿಂದ ಡಿಕೆಶಿ ಬಂಧನದ ಹೈಡ್ರಾಮಾ: ಕಾಂಗ್ರೆಸ್ ಕಿಡಿ

ಆರ್ಥಿಕ ಹಿಂಜರಿತದಿಂದ ದೇಶ ಜರ್ಜರಿತವಾಗುತ್ತಿದ್ದು, ಇದನ್ನು ಮರೆಮಾಚಲು ದೇಶದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ಹೈಡ್ರಾಮಾ ಸೃಷ್ಟಿ ಮಾಡಿದೆ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Published: 04th September 2019 09:32 AM  |   Last Updated: 04th September 2019 09:32 AM   |  A+A-


DK Shivakumar Arrest

ಸಂಗ್ರಹ ಚಿತ್ರ

Posted By : Srinivasamurthy VN
Source : ANI

ನವದೆಹಲಿ: ಆರ್ಥಿಕ ಹಿಂಜರಿತದಿಂದ ದೇಶ ಜರ್ಜರಿತವಾಗುತ್ತಿದ್ದು, ಇದನ್ನು ಮರೆಮಾಚಲು ದೇಶದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ಹೈಡ್ರಾಮಾ ಸೃಷ್ಟಿ ಮಾಡಿದೆ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಸುದ್ದಿಸಂಸ್ಛೆಯೊಂದಿಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಅವರು, ಆರ್ಥಿಕ ಹಿಂಜರಿತದಿಂದ ದೇಶದ ಆರ್ಥಿಕತೆ ಕುಸಿಯುತ್ತಿದೆ. ಇಂತಹ ಗಂಭೀರ ವಿಚಾರವನ್ನು ದೇಶದ ಜನರಿಂದ ಮರೆಮಾಚಲು ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ಬಂಧನ ಪ್ರಹಸನದ ಹೈಡ್ರಾಮಾ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

'ಉತ್ತಮ ಆಡಳಿತ ನೀಡಲು ವಿಫಲವಾದ ಕೇಂದ್ರ ಸರ್ಕಾರ ದೇಶದ ಆರ್ಥಿಕ ಸ್ಥಿತಿ ಅಧಃಪತನಕ್ಕಿಳಿದಿರುವುದನ್ನು ಮರೆಮಾಚಲು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದೆ. ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಕ್ರಮವನ್ನು ಪಕ್ಷ ಖಂಡಿಸಿದ್ದು, ಕಾಂಗ್ರೆಸ್ ವಿರುದ್ಧ ಹಗೆತನ ಸಾಧಿಸುವ ಆಡಳಿತಾರೂಢ ಕೇಂದ್ರ ಸರ್ಕಾರದ ತಂತ್ರಗಾರಿಕಾ ಕ್ರಮ ಇದು'.

ಈ ಹಿಂದೆ ಆರ್ಥಿಕ ಅಭಿವೃದ್ಧಿ ಶೇ.5ಕ್ಕೆ ಕುಸಿದಾಗ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಬಂಧಿಸಲಾಯಿತು. ಇದೀಗ ಆರ್ಥಿಕ ಹಿಂಜರಿತದಿಂದ ಷೇರುಮಾರುಕಟ್ಟೆ ಕುಸಿದಿದ್ದು, ಹೂಡಿಕೆದಾರರಿಗೆ 2.5 ಲಕ್ಷ ಕೋಟಿ ನಷ್ಟವಾಗಿದೆ. ಇದನ್ನು ಮರೆಮಾಚಲು ಡಿಕೆ ಶಿವಕುಮಾರ್ ಅವರ ಬಂಧನ ಮಾಡಲಾಗಿದೆ. ಬ್ರಿಟೀಷರು ದೇಶದಲ್ಲಿ ಡಿವೈಡ್ ಅಂಡ್ ರೂಲ್ ಆಟದ ಮೂಲಕ ಆಡಳಿತಕ್ಕೆ ಮುಂಜಾಗಿದ್ದರೆ, ಮೋದಿ ನೇತೃತ್ವದ ಬಿಜೆಪಿ ಮಿಸ್ ಲೀಡ್ ಮತ್ತು ಮಿಸ್ ರೂಲ್ (ತಪ್ಪುದಾರಿಗೆಳೆಯುವುದು ಮತ್ತು ದುರಾಡಳಿತ) ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp