ಸಂಚಾರಿ ನಿಯಮ ಉಲ್ಲಂಘನೆ ಮಾಡುವ ಪೊಲೀಸರಿಗೆ ದುಪ್ಪಟ್ಟು ದಂಡ! 

ಹೊಸದಾಗಿ ಜಾರಿಗೆ ಬಂದಿರುವ ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿರುವವರಿಗೆ ಹೆಚ್ಚು ಮೊತ್ತದ ದಂಡ ವಿಧಿಸಲಾಗುತ್ತಿದೆ. ಅದೇ ದಂಡ ವಿಧಿಸುವ ಪೊಲೀಸರೇ ನಿಯಮ ಉಲ್ಲಂಘನೆ ಮಾಡಿದರೆ?

Published: 05th September 2019 05:01 PM  |   Last Updated: 05th September 2019 05:01 PM   |  A+A-


Delhi Traffic Police will pay double penalty if found violating new Motor Vehicles Act

ಸಂಚಾರಿ ನಿಯಮ ಉಲ್ಲಂಘನೆ ಮಾಡುವ ಪೊಲೀಸರಿಗೆ ದುಪ್ಪಟ್ಟು ದಂಡ!

Posted By : Srinivas Rao BV
Source : The New Indian Express

ನವದೆಹಲಿ: ಹೊಸದಾಗಿ ಜಾರಿಗೆ ಬಂದಿರುವ ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿರುವವರಿಗೆ ಹೆಚ್ಚು ಮೊತ್ತದ ದಂಡ ವಿಧಿಸಲಾಗುತ್ತಿದೆ. ಅದೇ ದಂಡ ವಿಧಿಸುವ ಪೊಲೀಸರೇ ನಿಯಮ ಉಲ್ಲಂಘನೆ ಮಾಡಿದರೆ?

ಈ ರೀತಿಯ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುವುದು ಸಹಜ, ಇದಕ್ಕೆ ದೆಹಲಿ ಸಂಚಾರಿ ಪೊಲೀಸರು ಉತ್ತರ ಕಂಡುಕೊಂಡಿದ್ದಾರೆ. ದೆಹಲಿ ಸಂಚಾರಿ ಪೊಲೀಸರು ಒಂದು ವೇಳೆ ತಮ್ಮ ಸಿಬ್ಬಂದಿ ಯಾರಾದರೂ ನಿಯಮ ಉಲ್ಲಂಘನೆ ಮಾಡಿದರೆ ಸಾಮಾನ್ಯರಿಗೆ ವಿಧಿಸಲಾಗುವ ದಂಡದ ಮೊತ್ತಕ್ಕಿಂತಲೂ ದುಪ್ಪಟ್ಟು ದಂಡವನ್ನು ತೆರಬೇಕಾಗುತ್ತದೆ ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ದೆಹಲಿ ಜಂಟಿ ಪೊಲೀಸ್ ಆಯುಕ್ತ (ಟ್ರಾಫಿಕ್)  ಮೀನು ಚೌಧರಿ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp