ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಮುಂಬೈ, ಥಾಣೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ 

ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಮುಂಬೈ, ಥಾಣೆ ಮತ್ತು ಕೊಂಕಣ ಪ್ರದೇಶದ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.  
ಥಾಣೆಯ ರೈಲ್ವೆ ಹಳಿಯಲ್ಲಿ ನೀರು ನಿಂತಿರುವುದು
ಥಾಣೆಯ ರೈಲ್ವೆ ಹಳಿಯಲ್ಲಿ ನೀರು ನಿಂತಿರುವುದು

                            ವಿಮಾನ, ರೈಲ್ವೆ ಸೇವೆಯಲ್ಲಿ ವ್ಯತ್ಯಯ 

ಮುಂಬೈ: ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಮುಂಬೈ, ಥಾಣೆ ಮತ್ತು ಕೊಂಕಣ ಪ್ರದೇಶದ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. 


ಮಳೆಯಲ್ಲಿ ಸಿಕ್ಕಿಹಾಕಿಕೊಂಡ ಜನರಿಗೆ ಬೃಹನ್ ಮುಂಬೈ ವಲಯದ ಶಾಲೆಗಳಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಿಕೊಡಲಾಗುವುದು ಎಂದು ಪಾಲಿಕೆ ನಿನ್ನೆ ಘೋಷಿಸಿತ್ತು. ನಿನ್ನೆ ಬೃಹನ್ ಮುಂಬೈ ಪಾಲಿಕೆಯ ಹೆಚ್ಚುವರಿ ಆಯುಕ್ತ ಎ ಜರ್ಹಾದ್ ಶಾಲೆಗಳಿಗೆ ಹೋಗಿ ಅಲ್ಲಿ ನೆಲೆ ಪಡೆದುಕೊಂಡ ಜನರಿಗೆ ಒದಗಿಸಲಾದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.


ಮುಂಬೈ ಸೇರಿದಂತೆ ಮಹಾರಾಷ್ಟ್ರದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ರೈಲು ಮತ್ತು ವಿಮಾನ ಹಾರಾಟ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ. ಹಲವು ಕಡೆಗಳಲ್ಲಿ ಪ್ರವಾಹವಾಗಿದೆ. ಮುಂದಿನ 48 ಗಂಟೆಗಳ ಕಾಲ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com